HEALTH TIPS

ಅಮೆರಿಕ ಫೆಡರಲ್ ಬ್ಯಾಂಕ್ ನಿರ್ಣಯದ ಎಫೆಕ್ಟ್; ರೂಪಾಯಿ ಮೌಲ್ಯ ಕುಸಿತ

   
     ಮುಂಬೈ: ಅಮೆರಿಕ ಫೆಡರಲ್ ಬ್ಯಾಂಕ್ ಸಂಸ್ಥೆ ತನ್ನ ಬಡ್ಡಿದರದ ಕುರಿತು ನಿರ್ಣಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಕುಸಿತಕಂಡಿದೆ.
    ನಿನ್ನೆ ಬೆಳಿಗ್ಗೆ ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯದಲ್ಲಿ ಸುಮಾರು 11 ಪೈಸೆಯಷ್ಟು ಕುಸಿತ ಕಂಡುಬಂದಿದೆ. ಆ ಮೂಲಕ ಪ್ರಸ್ತುತ ಡಾಲರ್ ಎದುರು ರೂಪಾಯಿ  70.95 ರೂಗೆ ಕುಸಿತಕಂಡಿದೆ.  ರೂಪಾಯಿ ಮೌಲ್ಯ ಕುಸಿತಕ್ಕೆ ಅಮೆರಿಕ ಫೆಡರಲ್ ಬ್ಯಾಂಕ್ ನಿರ್ಣಯ ಕಾರಣ ಎಂದು ಹೇಳಲಾಗುತ್ತಿದ್ದು, ಇಂದು ಅಮೆರಿಕ ಫೆಡರಲ್ ಬ್ಯಾಂಕ್ ಸಂಸ್ಥೆ ತನ್ನ ಬಡ್ಡಿದರದ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಗೆ ಬೇಡಿಕೆ ಹೆಚ್ಚಾಗಿದೆ. ಇದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ರೂಪಾಯಿ ಮೌಲ್ಯದಲ್ಲಿ 11 ಪೈಸೆಯಷ್ಟು ಕುಸಿತವಾಗಿದೆ.
    ಮಂಗಳವಾರದ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 70.84ರೂಗಳಷ್ಟಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries