HEALTH TIPS

ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ

          ನವದೆಹಲಿ : ಕೊರೊನಾ ವೈರಸ್ ಸೋಂಕು ಹರಡದಂತೆ ದೇಶದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಒಂದು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. ಜೂನ್ 30ರ ತನಕ ಭಾರತದಲ್ಲಿ 5ನೇ ಹಂತದ ಲಾಕ್ ಡೌನ್ ಜಾರಿಯಲ್ಲಿರಲಿದೆ.

            ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿರುವ 4ನೇ ಹಂತದ ಲಾಕ್ ಡೌನ್ ಅವಧಿ ಇಂದಿಗೆ ಮುಕ್ತಾಯವಾಗುತ್ತಿದೆ. ಆದ್ದರಿಂದ, ನಿನ್ನೆ ಲಾಕ್ ಡೌನ್ ವಿಸ್ತರಣೆ ಮಾಡುವ ತೀರ್ಮಾನವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಅಭಿಪ್ರಾಯ ಸಂಗ್ರಹಣೆ ಮಾಡಿದ್ದರು. ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದರು.

         ಜೂನ್ 8ರಿಂದ ಪ್ರಾರ್ಥನಾ ಮಂದಿರ ಓಪನ್:

     ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಅನ್ವಯ ಜೂನ್ 8ರಿಂದ ದೇವಾಲಯ, ಚರ್ಚ್, ಮಸೀದಿ ಸೇರಿದಂತೆ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಇಲ್ಲಿ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಹೊರಡಿಸಲಿವೆ.

        ಹೋಟೆಲ್, ರೆಸ್ಟೋರೆಂಟ್:

     ಜೂನ್ 8ರಿಂದ ಹೋಟೆಲ್, ರೆಸ್ಟೋರೆಂಟ್‍ಗಳ ಬಾಗಿಲು ತೆರೆಯಲು ಒಪ್ಪಿಗೆ ನೀಡಲಾಗಿದೆ. 4 ಹಂತದ ಲಾಕ್ ಡೌನ್‍ನಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಮಾತ್ರ ಅನುಮತಿಯನ್ನು ನೀಡಲಾಗಿತ್ತು. ಈಗ ಅಲ್ಲಿಯೇ ಆಹಾರ ಸೇವಿಸಲು ಅವಕಾಶ ಸಿಗಲಿದೆ.

         ಶಾಪಿಂಗ್ ಮಾಲ್ ಬಾಗಿಲು ತೆರೆಯಲಿದೆ:

     ಕೇಂದ್ರ ಗೃಹ ಇಲಾಖೆ ಜೂನ್ 8ರಿಂದ ಶಾಪಿಂಗ್ ಮಾಲ್‍ಗಳ ಬಾಗಿಲು ತೆರೆಯಲು ಅನುಮತಿ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.

         ಶಾಲಾ-ಕಾಲೇಜು ತೆರೆಯುವುದೇ?:

    ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಸೆಂಟರ್‍ಗಳನ್ನು ತೆರೆಯುವ ಬಗ್ಗೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಶಿಕ್ಷಣ ಸಂಸ್ಥೆಗಳು ಪೆÇೀಷಕರ ಜೊತೆ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ. ಎಲ್ಲಾ ಅಭಿಪ್ರಾಯ ಸಂಗ್ರಹಣೆ ಮಾಡಿ ಜುಲೈನಲ್ಲಿ ಬಾಗಿಲು ತೆರೆಯುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

       ಜಿಮ್, ಸ್ವಿಮ್ಮಿಂಗ್ ಪೂಲ್ ಚಿತ್ರಮಂದಿರ:

     ಜಿಮ್, ಸ್ವಿಮ್ಮಿಂಗ್ ಪೂಲ್ ಬಾರ್, ಅಮ್ಯೂಸ್‍ಮೆಂಟ್ ಪಾರ್ಕ್ ಮುಂತಾದವುಗಳನ್ನು ಪರಿಸ್ಥಿತಿ ನೋಡಿಕೊಂಡು ತೆರೆಯುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಸಮಾವೇಶ/ರಾಜಕೀಯ ಕಾರ್ಯಕ್ರಮ/ಕ್ರೀಡೆ/ಸಾಂಸ್ಕøತಿಕ/ಧಾರ್ಮಿಕ ಮುಂತಾದ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ಅವಕಾಶ ನೀಡುವ ಕುರಿತು ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ.





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries