ನವದೆಹಲಿ : ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಜೂನ್ 30ರ ತನಕ ದೇಶದಲ್ಲಿ 5ನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ಶುಕ್ರವಾರ ಕೇಂದ್ರ ಗೃಹ ಸಚಿವಾಲಯ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ 5ನೇ ಹಂತದ ಲಾಕ್ ಡೌನ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ಹಲವಾರು ಅಂಶಗಳ ಕುರಿತು ಮಾಹಿತಿ ನೀಡಲಾಗಿದೆ. 5ನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಇಡೀ ದೇಶದಲ್ಲಿ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆ ತನಕ ಕಫ್ರ್ಯೂ ಜಾರಿಯಲ್ಲಿರಲಿದೆ. ಪ್ರಸ್ತುತ ವಿವಿಧ ರಾಜ್ಯ/ಕೇಂದ್ರಾಡಳಿತ ಪ್ರದೇಶದಲ್ಲಿ ಸಂಜೆ 7 ರಿಂದ ಬೆಳಗ್ಗೆ 7ರ ತನಕ ಕಫ್ರ್ಯೂ ಜಾರಿಯಲ್ಲಿದೆ.
ಸ್ಥಳೀಯ ಸರ್ಕಾರಗಳು ಘೋಷಣೆ ಮಾಡಿರುವ ಕಂಟೈ ನ್ಮೆಂಟ್ ಝೋನ್‍ಗಳಲ್ಲಿ ಲಾಕ್ ಡೌನ್ ನಿಯಮಗಳ ವಿನಾಯಿತಿ ಅನ್ವಯ ಆಗುವುದಿಲ್ಲ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಬಫರ್ ಝೋನ್‍ನಲ್ಲಿ ಪರಿಸ್ಥಿತಿ ನೋಡಿಕೊಂಡು ಸ್ಥಳೀಯ ಅಧಿಕಾರಿಗಳು ತೀರ್ಮಾನ ಕೈಗೊಳ್ಳಬೇಕು.
ಅಂತರಾಜ್ಯಗಳ ನಡುವೆ ಜನರು, ಸಾಮಾಗ್ರಿಗಳನ್ನು ಹೊತ್ತ ವಾಹನಗಳ ಸಂಚಾರಕ್ಕೆ ಯಾವುದೇ ನಿಬರ್ಂಧ ಇರುವುದಿಲ್ಲ ಮತ್ತು ಇದಕ್ಕೆ ಪ್ರತ್ಯೇಕವಾದ ಪಾಸುಗಳನ್ನು ಪಡೆಯುವ ಅಗತ್ಯವಿಲ್ಲ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಆದರೆ, ಪರಿಸ್ಥಿತಿ ನೋಡಿಕೊಂಡು ರಾಜ್ಯಗಳು ನಿಬರ್ಂಧ ವಿಧಿಸಬಹುದು ಎಂದು ಹೇಳಿದೆ. ಪ್ರಯಾಣಿಕ ರೈಲು ಸೇವೆ, ದೇಶಿಯ ವಿಮಾನ ಸೇವೆ ಇರಲಿದೆ. ಮೆಟ್ರೋ, ಅಂತರಾಷ್ಟ್ರೀಯ ವಿಮಾನ ಪ್ರಯಾಣದ ಕುರಿತು ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತದೆ.