HEALTH TIPS

ಭಾರತಕ್ಕೆ ಪ್ರತಿಸ್ಪರ್ಧಿಯೇ ಇಲ್ಲ, ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಮತ್ತೆ ಭಾರತ!

     
           ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಐದು ತಾತ್ಕಾಲಿಕ ಸದಸ್ಯತ್ವಕ್ಕಾಗಿ ಜೂನ್ 17 ರಂದು ಚುನಾವಣೆ ನಡೆಸಲು ವಿಶ್ವಸಂಸ್ಥೆ ನಿರ್ಧರಿಸಿದೆ.
         ಏಷ್ಯಾ ಪೆಸಿಫಿಕ್ ವಲಯದ ಸ್ಥಾನಕ್ಕೆ ಭಾರತ ಏಕಮಾತ್ರ ಸ್ಪರ್ಧಿಯಾಗಿರುವುದರಿಂದ ಚುನಾವಣೆ ಕೇವಲ ಔಪಚಾರಿಕ ಪ್ರಕ್ರಿಯೆ ಎಂಬಂತೆ ಕಾಣಿಸುತ್ತಿದೆ.
   ಕೋವಿಡ್-19 ಹಿನ್ನೆಲೆಯಲ್ಲಿ ಚುನಾವಣೆಗೆ ವಿಶ್ವಸಂಸ್ಥೆ ವಿಶೇಷ ವ್ಯವಸ್ಥೆ ಮಾಡುತ್ತಿದೆ. ಈ ಸಂಬಂಧ 193 ಸದಸ್ಯ ದೇಶಗಳ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯ ಕುರಿತು ವಿಶೇಷ ನಿರ್ಣಯ ಅಂಗೀಕರಿಸಿದೆ.
        2021-22ರ ಅವಧಿಗೆ ಏಷ್ಯಾ ಪೆಸಿಫಿಕ್ ಸ್ಥಾನಕ್ಕೆ ಭಾರತದ ನಾಮ ನಿರ್ದೇಶನವನ್ನು, ಕಳೆದ ವರ್ಷ ಜೂನ್ ನಲ್ಲಿ ಚೀನಾ, ಪಾಕಿಸ್ತಾನ ಸೇರಿ  55 ದೇಶಗಳು ಬೆಂಬಲಿಸಿದ್ದವು. ಭಾರತ ಕೊನೆಯ ಬಾರಿಗೆ 2011-12ರಲ್ಲಿ ಭದ್ರತಾ ಮಂಡಳಿ ತಾತ್ಕಾಲಿಕ ಸದಸ್ಯ ದೇಶವಾಗಿ ಸೇವೆ ಸಲ್ಲಿಸಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries