HEALTH TIPS

ಕೊರೋನಾ ಹೆಚ್ಚಳ ಹಿನ್ನೆಲೆ: ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ-ದ.ಕ. ಜಿಲ್ಲಾಧಿಕಾರಿ ಸೂಚನೆ

           ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಹಾಗೂ ಕೇರಳದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ಕೊರೋನಾ ಪಾಸಿಟಿವಿಟಿ ಸೂಚ್ಯಂಕದಲ್ಲಿ ಹೆಚ್ಚಳವಾಗುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ತಿಳಿಸಿದರು.
     ಅವರು ನಿನ್ನೆ( ಜು.30) ದ.ಕ. ಜಿಲ್ಲೆಯ ಗಡಿ ಭಾಗವಾದ ತಲಪಾಡಿ ಚೆಕ್‍ಪೋಸ್ಟ್ ಗೆ ಭೇಟಿ ನೀಡಿ, ಅಲ್ಲಿ ಕೋವಿಡ್ ಸೋಂಕು ಕುರಿತು ಕೇರಳದಿಂದ ರಾಜ್ಯಕ್ಕೆ ಬರುವವರ ತಪಾಸಣಾ ಕಾರ್ಯವನ್ನು ಪರಿಶೀಲಿಸಿ, ಮಾಧ್ಯಮದವರೊಂದಿಗೆ ಮಾತನಾಡಿದರು.
         ಈಗಾಗಲೇ ಕೋವಿಡ್ ಲಸಿಕೆ ಪಡೆದಿದ್ದರೂ ಕೂಡ ಜಿಲ್ಲೆಯೊಳಗೆ ಪ್ರವೇಶಿಸುವ ಸಂದರ್ಭದಲ್ಲೂ ತಪಾಸಣಾ ಕೇಂದ್ರದಲ್ಲಿ ಸೂಕ್ತವಾಗಿ ಪರಿಶೀಲಿಸಬೇಕು, ಈ ತಪಾಸಣಾ ಕೇಂದ್ರದ ಮೂಲಕ ಜಿಲ್ಲೆಗೆ ಬರುವವರನ್ನು ಆರ್ ಟಿಪಿಸಿಆರ್ ತಪಾಸಣೆಗೆ ಒಳಪಡಿಸಲಾಗುತ್ತಿದೆ, ಅದರಂತೆ ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿಯೂ ಸಹ ಪ್ರಯಾಣಿಕರಿಗೆ ತಪಾಸಣೆ ಮಾಡಲಾಗುತ್ತಿದೆ ಎಂದರು.
       ಕಾಸರಗೋಡಿನಲ್ಲಿ ಶೇ.14 ರಷ್ಟು ಕೊರೊನಾ ಪಾಸಿಟಿವಿಟಿ ರೇಟ್ ಇದ್ದು, ಅಲ್ಲಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರಿಂದಲೇ ಈ ಜಿಲ್ಲೆಯಲ್ಲಿ ಕೊರೋನಾ ಹೆಚ್ಚಾಗುತ್ತಿದೆ ಎಂಬ ಸಂಶಯ ಉಂಟಾಗಿದೆ. ಆದ್ದರಿಂದ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆಯ ಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ನಿರ್ವಹಿಸಲಾಗುತ್ತಿದೆ ಎಂದರು. ಕಾಲೇಜುಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದು, ಕೋವಿಡ್ ನಿಯಮಗಳನ್ನು ಚಾಚುತಪ್ಪದೇ ಪಾಲಿಸುವುದರೊಂದಿಗೆ ಕೋವಿಡ್ ಸೋಂಕು ಹರಡದಂತೆ ನಿಗಾವಹಿಸಬೇಕು ಎಂದರು. ಜಿಲ್ಲೆಯಲ್ಲಿ ಪ್ರತಿದಿನ 7500 ರಿಂದ 8000 ದವರೆಗೆ ಕೋವಿಡ್ ತಪಾಸಣೆ ಮಾಡುವ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
      ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್ ಗುರುಪ್ರಸಾದ್, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ವೈದ್ಯಾಧಿಕಾರಿಗಳು, ಪೋಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries