HEALTH TIPS

ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಳ: ಆರೋಗ್ಯ ಸಚಿವರು ಹೇಳಿದ್ದೇನು?

                   ತಿರುವನಂತಪುರಂ: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ ಆದರೆ ಕೊರೊನಾ ಲಸಿಕೆ ಸಿಗುತ್ತಿಲ್ಲ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ರಾಜ್ಯದಲ್ಲಿ ಶೇ.50ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿಲ್ಲ, ನಾವು ಆದಷ್ಟು ಕೊರೊನಾ ಲಸಿಕೆ ಕಡೆಗೆ ಗಮನಕೊಡುವುದು ಉತ್ತಮ. ಆಸ್ಪತ್ರೆಗೆ ದಾಖಲಾಗಿರುವವರ ಪ್ರಮಾಣ ಕಡಿಮೆ ಇದೆ. ಐಸಿಯು ಬೆಡ್‌ಗಳು ಕೂಡ ಖಾಲಿ ಇವೆ ಎಂದಿದ್ದಾರೆ.

               ಇತ್ತೀಚೆಗಷ್ಟೇ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿತ್ತು, ಹಲವು ಜಿಲ್ಲೆಗಳ ಪರಿಶೀಲನೆ ನಡೆಸಿದೆ. ನಮ್ಮ ಬಳಿಯೂ ಮಾತುಕತೆ ನಡೆಸಿದೆ. ನಾವು ತೆಗೆದುಕೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚೆಯೂ ನಡೆದಿದೆ ಎಂದರು.

          ಕೇರಳದಲ್ಲಿ ಶುಕ್ರವಾರ 20,772 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಕಳೆದ 4 ದಿನಗಳಿಂದ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಪಾಸಿಟಿವಿಟಿ ದರ ಶೇ.13.61ರಷ್ಟಿದೆ.


           ಜುಲೈ 29ರಂದು ಭಾರತದ ಒಟ್ಟು ಪ್ರಕರಣಗಳ ಪೈಕಿ ಶೇ.50ರಷ್ಟು ಪ್ರಕರಣಗಳು ಕೇರಳದಲ್ಲಿ ವರದಿಯಾಗಿತ್ತು. ಸಾವಿನ ಪ್ರಮಾಣ ಶೇ.0.4ರಷ್ಟಿದೆ ಎಂದರು.

           ದೇಶಾದ್ಯಂತ ಕೊರೊನಾ ಎರಡನೇ ಅಲೆಯು ತಗ್ಗುತ್ತಿರುವ ಲಕ್ಷಣಗಳು ಹಲವು ರಾಜ್ಯಗಳಲ್ಲಿ ಗೋಚರವಾಗುತ್ತಿದ್ದರೂ, ಕೇರಳದಲ್ಲಿ ಮಾತ್ರ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಕೇವಲ 10 ದಿನಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12 ಸಾವಿರದಷ್ಟು ಏರಿಕೆಯಾಗಿರುವುದು ಮೂರನೇ ಅಲೆಯ ಭೀತಿ ಸೃಷ್ಟಿಸಿದೆ.

               ದೇಶದೆಲ್ಲೆಡೆ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದರೆ, ನೆರೆಯ ಕೇರಳ ರಾಜ್ಯದಲ್ಲಿ ಮಾತ್ರ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸರಾಸರಿ 22 ಸಾವಿರಕ್ಕೂ ಅಧಿಕ ಪ್ರಕರಣಗಳು ಕಂಡುಬರುತ್ತಿವೆ.

ಕೊರೊನಾ ಒಂದನೇ ಅಲೆ ನಿಯಂತ್ರಣದಲ್ಲಿ ಮತ್ತು ಲಸಿಕೆ ವಿಚಾರದಲ್ಲಿ ಜಾಗತಿಕವಾಗಿ ಮನ್ನಣೆ ಗಳಿಸಿದ ಕೇರಳ ರಾಜ್ಯ ಈಗ ಕೊರೊನಾ ಎರಡನೇ ಅಲೆಯನ್ನು ನಿಭಾಯುಸುವುದಕ್ಕೆ ತಡಕಾಡುತ್ತಿದ್ದು, ಇದೇನಾ ಕೇರಳ ಮಾದರಿ ಅಂತಾ ಪ್ರತಿಪಕ್ಷಗಳು ಪ್ರಶ್ನಿಸುತ್ತಿದೆ.

          ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬಕ್ಕೆ ಮೂರು ದಿನ ಸಂಪೂರ್ಣ ರಿಯಾಯಿತಿ ನೀಡಿದ ಕೇರಳ ಸರ್ಕಾರ ಈಗ ಮಾಡಿದ ತಪ್ಪಿಗೆ ಈಗ ಶಿಕ್ಷೆ ಅನುಭವಿಸುತ್ತಿದೆ, ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕೇರಳದಲ್ಲಿ ಜಾಸ್ತಿಯಾಗುತ್ತಿದೆ.

              ಕೇರಳದಲ್ಲಿ ಕೊರೊನಾ ಅಬ್ಬರ ಹೆಚ್ಚಾಗುತ್ತಿದ್ದು, ಕೇರಳ ಗಡಿ ಭಾಗವನ್ನು ಹಂಚಿಕೊಂಡ ರಾಜ್ಯದ ಗಡಿ ಜಿಲ್ಲೆಗಳಿಗೆ ಆತಂಕ ಮೂಡಿಸಿದೆ. ಪ್ರಮುಖವಾಗಿ ಕೇರಳ ರಾಜ್ಯದ ಜೊತೆ ನಿಕಟ ಸಂಪರ್ಕ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಆತಂಕ ಎದುರಾಗಿದೆ.


                        ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ

ಝೀಕಾ ಸೋಂಕು ಕಡಿಮೆಯಾಗಿಲ್ಲ

          ಕೊರೊನಾ ಭೀತಿ ನಡುವೆಯೇ ಕೇರಳದಲ್ಲಿ ಝೀಕಾ ವೈರಸ್‌ ಸೋಂಕಿನ 10 ಪ್ರಕರಣಗಳು ವರದಿಯಾಗಿವೆ. ತಿರುವನಂತಪುರಂ ನಿವಾಸಿಗರಲ್ಲಿ ಫ್ಲಾವಿ ವೈರಸ್‌ ಪತ್ತೆಯಾಗಿದ್ದು, ಜ್ವರ, ತಲೆನೋವು, ಮೈಕೈ ನೋವು ಚರ್ಮದ ಮೇಲೆ ಕಲೆಗಳ ಲಕ್ಷಣಗಳು ಜೋರಾಗಿವೆ. ಸೊಳ್ಳೆಗಳ ಮೂಲಕ ಹರಡುವ ಈ ಸೋಂಕು, ಗರ್ಭಿಣಿಯರಲ್ಲಿ ಕಾಣಿಸಿಕೊಂಡಲ್ಲಿ ಶಿಶುವಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ," ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಹೇಳಿದ್ದಾರೆ.

                ಕೊರೊನಾ ನಿಯಮಗಳ ಸಡಿಲಿಕೆ

              ಕೇರಳದ ಜತೆಗೆ ಮಹಾರಾಷ್ಟ್ರದಲ್ಲಿಯೂ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ನಿಧಾನವಾಗಿ ಏರಿಕೆ ಕಾಣುತ್ತಿವೆ. ಕೊಲ್ಹಾಪುರ, ಪುಣೆ ಗ್ರಾಮೀಣ, ಸಾಂಗ್ಲಿ, ಸತಾರ, ರತ್ನಗಿರಿ, ಸಿಂಧುದುರ್ಗ್‌, ರಾಯಘಡ ಮತ್ತು ಪಾಲ್ಘರ್‌ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರವು ರಾಜ್ಯದ ಸರಾಸರಿಗಿಂತ ಹೆಚ್ಚಿದೆ. ಈ ನಿಟ್ಟಿನಲ್ಲಿ ಕಾಂಟ್ಯಾಕ್ಟ್ ಟ್ರೇಸಿಂಗ್‌, ಸಂಚಾರಗಳಿಗೆ ಕಠಿಣ ನಿರ್ಬಂಧ ಹೇರುವಂತೆ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಶೇಷ ಲಸಿಕಾ ಅಭಿಯಾನ ನಡೆಸಿ , ಪ್ರಕರಣಗಳ ಸಂಖ್ಯೆ ನಿಯಂತ್ರಣ ತಪ್ಪದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ. ಇದೀಗ ಕೆಲವು ನಿಯಮಗಳ ಸಡಿಲಿಕೆ ಮಾಡಲಾಗಿದೆ.

                ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ಒಪ್ಪಿಗೆ

            ಫ್ರಾನ್ಸ್‌ ಮೂಲದ ಸನೊಫಿ ಮತು ಬ್ರಿಟನ್‌ ಮೂಲದ ಗ್ಲ್ಯಾಕ್ಸೊ ಸ್ಮಿತ್‌ಲೈನ್‌ (ಜಿಎಸ್‌ಕೆ) ಔಷಧ ತಯಾರಿಕೆ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿರುವ ಕೊರೊನಾ ನಿರೋಧಕ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್‌ ಪ್ರಯೋಗವನ್ನು ಭಾರತದಲ್ಲಿ ನಡೆಸಲು ಸರಕಾರ ಅನುಮತಿ ನೀಡಿದೆ. ಸುರಕ್ಷತೆ, ಪರಿಣಾಮಕಾರಿತ್ವ ಮತ್ತು ರೋಗನಿರೋಧಕತೆ ವೃದ್ಧಿಗೆ ಮಾನವ ದೇಹದಲ್ಲಿ ಲಸಿಕೆಯು ಯಾವ ರೀತಿಯಲ್ಲಿ ಪ್ರತಿಕ್ರಿಯಿಸಲಿದೆ ಎಂಬುದನ್ನು ಪ್ರಯೋಗದಲ್ಲಿ ಸೂಕ್ಷ್ಮವಾಗಿ ಅಧ್ಯಯನ ನಡೆಸಲಾಗುವುದು. 18 ವರ್ಷಕ್ಕೂ ಮೇಲ್ಪಟ್ಟ 35 ಸಾವಿರ ಸ್ವಯಂಸೇವಕರು ಪ್ರಯೋಗದಲ್ಲಿ ಭಾಗಿಯಾಗಲಿದ್ದಾರೆ. ಅಮೆರಿಕ, ಆಫ್ರಿಕಾ, ಲ್ಯಾಟಿನ್‌ ಅಮೆರಿಕದಲ್ಲೂ ಪ್ರಯೋಗ ಜರುಗಲಿದೆ ಎಂದು ಕಂಪನಿ ಪ್ರಕಟಣೆ ತಿಳಿಸಿದೆ.

2-ಡಿಜಿ ಔಷಧ ತಯಾರಿಕೆ

             ಕೊರೊನಾ ಸೋಂಕಿತರಲ್ಲಿ ಶೀಘ್ರ ಗುಣಮುಖರನ್ನಾಗಿಸುವ ಸಾಮರ್ಥ್ಯದ '2-ಡಿಜಿ' ಔಷಧವನ್ನು ಅಭಿವೃದ್ಧಿಪಡಿಸಿರುವ ರಕ್ಷಣಾ ಸಚಿವಾಲಯ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ 'ಡಿಆರ್‌ಡಿಒ', ಮ್ಯಾನ್‌ಕೈಂಡ್‌ ಫಾರ್ಮಾ ಕಂಪನಿಗೆ ಔಷಧ ತಯಾರಿಕೆಗೆ ಅನುಮತಿ ನೀಡಿದೆ.

               ವಿಶಾಖಪಟ್ಟಣಂ ಮತ್ತು ಹಿಮಾಚಲ ಪ್ರದೇಶಗಳಲ್ಲಿನ ತನ್ನ ಘಟಕಗಳಲ್ಲಿ ಕಂಪನಿಯು ಔಷಧದ ತಯಾರಿಕೆ ಮಾಡಲಿದೆ. ಔಷಧದ ತುರ್ತು ಬಳಕೆಗೆ ಭಾರತೀಯ ಔಷಧ ಗುಣಮಟ್ಟ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಮೇ ತಿಂಗಳಲ್ಲಿಯೇ ಅನುಮತಿ ನೀಡಿದೆ. ಪ್ರಮುಖವಾಗಿ ಆಮ್ಲಜನಕ ಪೂರೈಕೆ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಸೋಂಕಿತರು ಶೀಘ್ರವಾಗಿ ಗುಣಮುಖರಾಗಲು ಅಗತ್ಯ ಶಕ್ತಿಯನ್ನು 2-ಡಿಜಿಯು ದೇಹಕ್ಕೆ ನೀಡಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries