HEALTH TIPS

ದೇಶದಲ್ಲಿ ಕೊರೋನಾ ಹೆಚ್ಚಳ: ನಿನ್ನೆಗಿಂತ ಇಂದು ಅಲ್ಪ ಕುಸಿತ, 9,923 ಹೊಸ ಪ್ರಕರಣ ಪತ್ತೆ, 17 ಸಾವು

 ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 9,923 ಹೊಸ ಪ್ರಕರಣ ಪತ್ತೆಯಾಗಿದೆ. ನಿನ್ನೆಗಿಂತ ಇಂದು  ಅಲ್ಪ ಕುಸಿತವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇದೇ ಅವಧಿಯಲ್ಲಿ ದೇಶದಲ್ಲಿ 17ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದು, ದೇಶಾದ್ಯಂತ ಒಟ್ಟಾರೇ ಮೃತರ ಸಂಖ್ಯೆ 5,24,890ಕ್ಕೆ ಏರಿಕೆಯಾಗಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ 79,313ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೇ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 0.18 ರಷ್ಟಿದೆ.


ಕಳೆದ 24 ಗಂಟೆಗಳಲ್ಲಿ 7,293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,27,15,193ಕ್ಕೆ ಏರಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ. 98. 61 ರಷ್ಟಿದ್ದು, ಮರಣ ಪ್ರಮಾಣ ಶೇ. 2.55 ರಷ್ಟಿದೆ. 

ಇದೇ ಅವಧಿಯಲ್ಲಿ ದೇಶಾದ್ಯಂತ ಒಟ್ಟಾರೇ 3,88,641 ಟೆಸ್ಟ್ ಮಾಡಲಾಗಿದೆ. ಈ ಮೂಲಕ ಒಟ್ಟಾರೇ ಪರೀಕ್ಷೆ ಸಂಖ್ಯೆ 85.85 ಕೋಟಿಗೆ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆಯವರೆಗೆ ದೇಶದಲ್ಲಿ 196.32 ಕೋಟಿಗೂ ಮೀರಿದ ಕೋವಿಡ್ ಲಸಿಕೆ ನೀಡಲಾಗಿದೆ. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries