ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲಾ ಶಿಕ್ಷಕಿಯ ಡ್ಯಾನ್ಸ್​​ಗೆ ಭಾರೀ ಪ್ರಶಂಸೆ!

 ನವದೆಹಲಿ: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಆದರೆ ಇಲ್ಲೊಬ್ಬ ಸರ್ಕಾರಿ ಶಾಲೆಯ ಶಿಕ್ಷಕಿ ಮಾಡಿರುವ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ಚಟುವಟಿಕೆಗಳು ಹೇಳಿಕೊಡುವುದಿಲ್ಲ ಎಂಬುವವರಿಗೆ ಈ ಶಿಕ್ಷಕಿ ಮಾದರಿಯಾಗಿದ್ದಾರೆ.


ಸರ್ಕಾರಿ ಶಾಲೆಗಳಲ್ಲೂ ಮಕ್ಕಳಲ್ಲಿನ ಎಲ್ಲಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ತಮ್ಮ ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡಿರುವ ವಿಡಿಯೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಭಾರೀ ವೈರಲ್​ ಆಗಿದೆ. ಎಲ್ಲಾ ಶಾಲೆಗಳಲ್ಲೂ ಇಂತಹ ಶಿಕ್ಷಕಿಯರು ಇರಬೇಕು. ಮಕ್ಕಳಿಗೆ ಪ್ರೋತ್ಸಾಹ ಕೊಡುವ ಶಿಕ್ಷಕರು ಇಂದು ಬೇಕಾಗಿದ್ದಾರೆ ಎಂದು ಹಲವರು ಟ್ವೀಟ್​ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸಮ್ಮರ್​ ಕ್ಯಾಂಪ್​ನ ಕೊನೇ ದಿನದಂದು ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಡ್ಯಾನ್ಸ್​ ಸ್ಟೆಪ್​ ಹಾಕಿರುವ ಶಿಕ್ಷಕಿಯ ಮನೋಜ್ಞ ನೃತ್ಯ ಇದೀಗ ಸಾಮಾಜಿಕ ಜಾಲತಾಣದ ಭಾರೀ ಮೆಚ್ಚುಗೆಯ ವಿಡಿಯೋ ಆಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries