ಜ್ಞಾನವಾಪಿ: ಇದೇ 21ರಂದು 'ಸುಪ್ರೀಂ' ವಿಚಾರಣೆ

               ನವದೆಹಲಿವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯ ಸಮೀಕ್ಷೆ ವೇಳೆ ಕಂಡುಬಂದ 'ಶಿವಲಿಂಗ'ಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಹೊಸ ಅರ್ಜಿಯ ವಿಚಾರಣೆಯನ್ನು ಇದೇ 21ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ.

               ಈ 'ಶಿವಲಿಂಗ'ವನ್ನು ಕಾರ್ಬನ್‌ ಡೇಟಿಂಗ್‌ಗೆ ಒಳಪಡಿಸುವ ಮೂಲಕ ಅದರ ಕಾಲಮಾನವನ್ನು ತಿಳಿದುಕೊಳ್ಳಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಸೂಚಿಸಬೇಕು ಎಂದೂ ಈ ಅರ್ಜಿಯಲ್ಲಿ ಕೋರಲಾಗಿದೆ.

                    ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದಂತೆ ಅಲ್ಲಿನ ವ್ಯವಹಾರಗಳನ್ನು ನೋಡಿಕೊಳ್ಳುವ 'ಅಂಜುಮನ್‌ ಇಂತಿಯಾಜ್‌ ಮಸೀದಿ ಸಮಿತಿ' ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೇ 21ರಂದು ನಡೆಯಲಿದೆ. ಅದರ ಜತೆಗೆ ವಕೀಲ ವಿಷ್ಣು ಶಂಕರ್‌ ಜೈನ್‌ ಅವರು ಸಲ್ಲಿಸಿರುವ ಈ ಹೊಸ ಅರ್ಜಿಯ ವಿಚಾರಣೆಯನ್ನೂ ತಗೆದುಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ತಿಳಿಸಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries