HEALTH TIPS

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 6,500 ಕ್ಕೂ ಹೆಚ್ಚು ಅಧ್ಯಾಪಕ ಹುದ್ದೆಗಳಲ್ಲಿ 375 ಮಾತ್ರ ಭರ್ತಿ: ಶಿಕ್ಷಣ ಇಲಾಖೆ

                ನವದೆಹಲಿ: ಸೆಪ್ಟೆಂಬರ್ ತಿಂಗಳಿನಿಂದೀಚೆಗೆ ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಕೇವಲ 375 ಬೋಧಕ ಹುದ್ದೆಗಳನ್ನು ಮಾತ್ರವೇ ಭರ್ತಿ ಮಾಡಲಾಗಿದೆಯೆಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸೋಮವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

           ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಸುಮಾರು 6549 ಹುದ್ದೆಗಳಿದ್ದು, ಇದಕ್ಕೆ ಹೋಲಿಸಿದಲ್ಲಿ ಭರ್ತಿಯಾಗಿರುವ ಹುದ್ದೆಗಳ ಸಂಖ್ಯೆ ತೀರಾ ಕಡಿಮೆ ಎಂದು ಅವರು ಹೇಳಿದ್ದಾರೆ.

            ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಬಿದ್ದಿರುವ ಉದ್ಯೋಗಗಳನ್ನು ಒಂದು ವರ್ಷದೊಳಗೆ ಕಾರ್ಯಾಚರಣೆಯ ರೀತಿಯಲ್ಲಿ ಭರ್ತಿ ಮಾಡಬೇಕೆಂದು ಸಚಿವ ಧರ್ಮೇಂದ್ರ ಪ್ರದಾನ್ ಅವರು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದ ಹೊರತಾಗಿಯ ನೇಮಕಾತಿಯು ಅತ್ಯಂತ ಕಡಿಮೆ ಪ್ರಮಾಣದಲ್ಲಿ ನಡೆದಿದೆ.

                      ಸೆಪ್ಟೆಂಬರ್ ತಿಂಗಳವರೆಗೆ ಕೇಂದ್ರ ಸರಕಾರವು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ 916 ಬೋಧಕ ಹುದ್ದೆಗಳನ್ನು ತುಂಬಲಾಗಿದೆಯೆಂದು ಪ್ರಧಾನ್ ಲೋಕಸಭೆಗೆ ತಿಳಿಸಿದರು. ಈ ಪೈಕಿ 375 ಮಂದಿಯನ್ನು ಕೇಂದ್ರೀಯ ವಿಶ್ವವಿದ್ಯಾನಿಲಯಗಳಲ್ಲಿ, 71 ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಗಲಲ್ಲಿ ಹಾಗೂ 27 ಮಂದಿಯನ್ನು, 27 ಮಂದಿಯನ್ನು ಭಾರತೀಯ ವಿಜ್ಞಾನ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆ ಯಲ್ಲಿ ಹಾಗೂ ನಾಲ್ವರನ್ನು ಯೋಜನಾ ಹಾಗೂ ವಾಸ್ತುಶಿಲ್ಪ ವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ನೇಮಕಗೊಳಿಸಲಾಗಿದೆ ಎಂದವರು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries