HEALTH TIPS

ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರಿಗೆ ಒಳ ಉಡುಪು ಕಳಚಿಸಿದ ಆರೋಪ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ

            ನವದೆಹಲಿ: ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿಗಳನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

                ಇದು ಅತಿರೇಕದ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದ್ದು, ವಿದ್ಯಾರ್ಥಿನಿಯರು ಮಾಡಿರುವ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಕಾಲಮಿತಿಯೊಳಗೆ ತನಿಖೆ ನಡೆಸಿ, ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ. 


                 ಕೇರಳ ಪೊಲೀಸ ಮಹಾನಿರ್ದೇಶಕರಿಗೂ ಆಯೋಗ ಪತ್ರ ಬರೆದಿದ್ದು, ಈ ವಿಚಾರದಲ್ಲಿ ನ್ಯಾಯಯುತವಾಗಿ ತನಿಖೆ ನಡೆಯಬೇಕು ಮತ್ತು ಒಂದು ವೇಳೆ ಆರೋಪ ಸತ್ಯವೆಂದು ಕಂಡುಬಂದಲ್ಲಿ ಸಂಬಂಧಿಸಿದ ಕಾನೂನಿನಡಿ ಎಫ್ ಐಆರ್ ದಾಖಲಿಸಬೇಕು. ಮೂರು ದಿನಗಳೊಳಗೆ  ಕ್ರಮ ಕೈಗೊಳ್ಳಬೇಕು ಎಂದು ಎನ್ ಸಿ ಡಬ್ಲ್ಯೂ ಹೇಳಿದೆ. 

                ನೀಟ್ ಪರೀಕ್ಷೆಗೂ ಮುನ್ನ ಒಳ ಉಡುಪು ಕಳಚುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸಲಾಗಿತ್ತು ಎಂಬುದರ ಬಗ್ಗೆ ಮಂಗಳವಾರ ಪ್ರತಿಭಟನೆ ನಡೆದಿದೆ. ಆದರೆ, ಈ ಆರೋಪ ಕಪೋಲ ಕಲ್ಪಿತ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸಮರ್ಥಿಸಿಕೊಂಡಿದೆ. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries