HEALTH TIPS

ಮುಂಗಾರು ಮತ್ತೆ ಪ್ರಬಲಗೊಳ್ಳುವ ಸೂಚನೆ: ಸೋಮವಾರ ಎರಡು ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ



              ತಿರುವನಂತಪುರ: ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.  ಎರಡು ಜಿಲ್ಲೆಗಳಲ್ಲಿ ಸೋಮವಾರ ತೀವ್ರ ಮಳೆಯ ಎಚ್ಚರಿಕೆ ನೀಡಲಾಗಿದೆ.
           ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲವು ದಿನಗಳ ವಿರಾಮದ ನಂತರ ಮುಂಗಾರು ಮತ್ತೆ ಚುರುಕಾಗುತ್ತಿದೆ ಎಂದು ಹವಾಮಾನ ಕೇಂದ್ರ ಅಂದಾಜಿಸಿದೆ. ರಾಜ್ಯದಲ್ಲಿ ಸೋಮವಾರ, ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಹೆಚ್ಚಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
           ಮಂಗಳವಾರ ತಿರುವನಂತಪುರದಿಂದ ತ್ರಿಶೂರ್‍ವರೆಗಿನ ಜಿಲ್ಲೆಗಳಲ್ಲಿ ಮತ್ತು ಬುಧವಾರ ಕೊಲ್ಲಂನಿಂದ ವಯನಾಡ್‍ವರೆಗಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಇದರ ಭಾಗವಾಗಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ನಾಳೆ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ. ಅಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries