HEALTH TIPS

ದೆಹಲಿಯಲ್ಲಿ ಮಂಕಿಪಾಕ್ಸ್‌ ರೋಗಿ ಆಸ್ಪತ್ರೆಗೆ ದಾಖಲು:

 

              ನವದೆಹಲಿ : ಶಂಕಿತ ಮಂಕಿಪಾಕ್ಸ್‌ ಸೋಂಕು ಲಕ್ಷಣಗಳಿರುವ ಗಾಜಿಯಾಬಾದ್‌ನ ವ್ಯಕ್ತಿಯೊಬ್ಬರು ಇಲ್ಲಿನ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ.

                 ಈ ವ್ಯಕ್ತಿ ಒಂದು ತಿಂಗಳ ಹಿಂದೆ ವಿದೇಶ ಪ್ರವಾಸ ಮಾಡಿದ್ದರು.

ಕಳೆದ ಒಂದು ವಾರದಿಂದ ಜ್ವರ ಮತ್ತು ಗುಳ್ಳೆಗಳು ಕಾಣಿಸಿ, ಮಂಗಳವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತ್ಯೇಕ ವಾರ್ಡ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವ್ಯಕ್ತಿಯಿಂದ ಮಾದರಿ ಸಂಗ್ರಹಿಸಿ ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ ಎಂದು ಮೂಲಗಳು ಹೇಳಿವೆ.

                   ಕೇರಳದಲ್ಲಿ ಮೂರು ಮತ್ತು ಪಶ್ಚಿಮ ದೆಹಲಿಯಲ್ಲಿ ಒಂದು ಪ್ರಕರಣ ಸೇರಿ ದೇಶದಲ್ಲಿ ಈವರೆಗೆ ನಾಲ್ಕು ಪ್ರಕರಣಗಳು ದೃಢಪಟ್ಟಿವೆ. ರಾಜಧಾನಿಯಲ್ಲಿ ಪತ್ತೆಯಾದ ಮೊದಲ ಪ್ರಕರಣದ ರೋಗಿ ಎಲ್‌ಎನ್‌ಜೆಪಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries