HEALTH TIPS

ಹಿರಿಯ ನಾಗರಿಕರಿಗೆ ಪ್ರಯಾಣ ದರ ರಿಯಾಯಿತಿ ಪುನರಾರಂಭಕ್ಕೆ ರೈಲ್ವೆ ಚಿಂತನೆ

 

           ನವದೆಹಲಿ: ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೆ, ರೈಲ್ವೆಯು ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ಪುನಃ ಆರಂಭಿಸಲು ಚಿಂತನೆ ನಡೆಸಿದೆ. ಕೆಲ ನಿಬಂಧನೆಗಳಿಗೆ ಒಳಪಟ್ಟು ಈ ಸೌಲಭ್ಯಗಳನ್ನು ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

                     ಈ ರಿಯಾಯಿತಿಗಳು ಜನರಲ್‌ ಹಾಗೂ ಸ್ಲೀಪರ್ ಕೋಚ್‌ಗಳಲ್ಲಿನ ಪ್ರಯಾಣಕ್ಕೆ ಮಾತ್ರ ಅನ್ವಯವಾಗಲಿದೆ ಎಂದು ಹೇಳಿವೆ.

                     ಈ ಮೊದಲು 58 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ 60 ವರ್ಷ ದಾಟಿದ ಪುರುಷರಿಗೆ ರಿಯಾಯಿತಿ ದರಗಳು ಅನ್ವಯವಾಗುತ್ತಿದ್ದವು. ಈಗ ಈ ರಿಯಾಯಿತಿ ಸೌಲಭ್ಯವನ್ನು 70 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡುವ ಪ್ರಸ್ತಾವ ಇದೆ ಎಂದು ಇವೇ ಮೂಲಗಳು ಹೇಳಿವೆ.

                    'ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿನ ರಿಯಾಯಿತಿಯನ್ನು ಮುಂದುವರಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಮತ್ತೆ ಆರಂಭಿಸುವುದಕ್ಕೆ ಸಂಬಂಧಿಸಿ ನಮ್ಮ ಮುಂದಿರುವ ಆಯ್ಕೆಗಳಿವು. ಆದರೆ, ಈ ನಿಟ್ಟಿನಲ್ಲಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ' ಎಂದು ಸ್ಪಷ್ಟಪಡಿಸಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries