HEALTH TIPS

ರಾಮದಾಸ್ ಕದಂ, ಆನಂದ ಅಸದುಲ್‌ರನ್ನು ಸೇನಾದಿಂದ ಉಚ್ಛಾಟನೆ ಮಾಡಿದ ಉದ್ಧವ್ ಠಾಕ್ರೆ

             ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾದ ಪ್ರಭಾವಿ ನಾಯಕರಾಗಿದ್ದ ರಾಮದಾಸ್ ಕದಂ ಹಾಗೂ ಮಾಜಿ ಸಂಸದ ಆನಂದ್ ಅಸದುಲ್ ಅವರನ್ನು ಶಿವ ಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಉಚ್ಛಾಟನೆ ಮಾಡಿದ್ದಾರೆ.

               ಕದಂ ಹಾಗೂ ಅಸದುಲ್ ಅವರು ಇಂದು ಬೆಳಿಗ್ಗೆಯಷ್ಟೇ ಶಿವ ಸೇನೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

               ಆದರೆ, ಅದಕ್ಕೂ ಮುನ್ನವೇ ಇಬ್ಬರೂ ನಾಯಕರನ್ನು ಠಾಕ್ರೆ ಪಕ್ಷದಿಂದ ಹೊರಹಾಕಿದ್ದಾರೆ.

ಉದ್ಧವ್ ಠಾಕ್ರೆ ಬಣದಲ್ಲಿ ಗುರುತಿಸಿಕೊಂಡಿದ್ದ ರಾಮದಾಸ್ ಕದಂ ಅವರು ಪಕ್ಷದಲ್ಲಿ ಪ್ರಮುಖ ನಾಯಕರಾಗಿದ್ದರು. ಅವರ ರಾಜೀನಾಮೆಯಿಂದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸುವ ಮೂಲಕ ಉದ್ಧವ್ ಠಾಕ್ರೆ ಅವರು ಬಾಳಾಸಾಹೇಬ್ ಠಾಕ್ರೆ ಅವರ ಸಿದ್ಧಾಂತಗಳನ್ನು ಗಾಳಿಗೆ ತೋರಿದ್ದಾರೆ ಎಂದು ಕದಂ ಆರೋಪ ಮಾಡಿದ್ದರು.

             ಈಗಾಗಲೇ ರಾಮದಾಸ್ ಕದಂ ಅವರು ಏಕನಾಥ ಶಿಂದೆ ನೇತೃತ್ವದ ಬಣದಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಮಾತನಾಡಿದ್ದ ರಾಮದಾಸ್, ನಾನು ಶಿವಸೇನೆಯಲ್ಲಿದ್ದೇನೆ. ಉದ್ಧವ್ ಠಾಕ್ರೆ ಅವರಿಗೆ ಬೆಂಬಲ ಮುಂದುವರೆಸುತ್ತೇನೆಂದು ಹೇಳಿಕೆ ನೀಡಿದ್ದರು.

                 ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಎದ್ದು ಏಕನಾಥ ಶಿಂದೆ ಬಣ ಈಗಾಗಲೇ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಮಾಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries