ಉಪರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಆಳ್ವಾ ನಾಮಪತ್ರ ಸಲ್ಲಿಕೆ

        ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವಾ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

          ಈ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎನ್‌ಸಿಪಿಯ ಶರದ್‌ ಪವಾರ್‌, ಸಿಪಿಐ-ಎಂ ಪಕ್ಷದ ಸೀತಾರಾಂ ಯೆಚೂರಿ ಸೇರಿದಂತೆ ಹಲವು ನಾಯಕರು ಆಳ್ವಾ ಅವರೊಂದಿಗೆ ಉಪಸ್ಥಿತರಿದ್ದರು.

            ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್‌ 10 ರಂದು ಮುಕ್ತಾಯವಾಗಲಿದೆ. ಹೀಗಾಗಿ ಆ ಸ್ಥಾನದ ಚುನಾವಣೆಗೆ ಆಗಸ್ಟ್‌ 6 ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.

           ಉಪರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿರುವ ಜಗದೀಪ್‌ ಧನಕರ್‌ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


grama rajya

Qries