HEALTH TIPS

ಸುರತ್ಕಲ್: ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

 

             ಮಂಗಳೂರು: ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ರಾತ್ರಿ ಸುರತ್ಕಲ್ ಬಳಿ ನಡೆದಿದೆ.

             ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹಲ್ಲೆಗೊಳಗಾದವರು.

ಗಂಭೀರ ಗಾಯಗೊಂಡ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

                ಸುರತ್ಕಲ್ ಜವಳಿ ಅಂಗಡಿಯ ಮುಂಭಾಗ ಈ ಘಟನೆ ನಡೆದಿದೆ. ಫಾಝಿಲ್ ಅವರು ಅಂಗಡಿಯ ಬಳಿ ನಿಂತುಕೊಂಡಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

                     ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries