HEALTH TIPS

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಸ್ಕ್ವಾಷ್​ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್

 

           ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಸ್ಕ್ವಾಷ್​ನಲ್ಲಿ ಭಾರತದ ಸೌರವ್ ಘೋಷಾಲ್ ಅವರು  ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಅವರು ಇತಿಹಾಸದಲ್ಲಿ ಕಾಮನ್ವೆಲ್ತ್ ಗೇಮ್ಸ್ ಸಿಂಗಲ್ಸ್ ನಲ್ಲಿ ಪದಕ ಗೆದ್ದ ಭಾರತದ ಮೊದಲ ಸ್ಕ್ವಾಷ್ ಆಟಗಾರಾರ ಎಂಬ ಗೌರವಕ್ಕೆ ಸೌರವ್ ಘೋಷಾಲ್ ಪಾತ್ರರಾಗಿದ್ದಾರೆ.

             ಸ್ಕ್ವಾಷ್​ ಪಂದ್ಯದಲ್ಲಿ 35 ವರ್ಷದ ಸೌರವ್ ಘೋಷಾಲ್ ಅವರು ಆತಿಥೇಯ ಇಂಗ್ಲೆಂಡ್ ಆಟಗಾರ ಜೇಮ್ಸ್ ವಿಲ್‌ಸ್ಟ್ರೋಪ್ ಅವರನ್ನು 3-0 ಅಂತರದಿಂದ ಸೋಲಿಸುವ ಮೂಲಕ ಕಂಚಿನ ಪದಕ ಪಡೆದರು. ಇದರೊಂದಿಗೆ ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

              1998 ರಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೊದಲ ಬಾರಿಗೆ ಸ್ಕ್ವಾಷ್ ಅನ್ನು ಸೇರಿಸಲಾಯಿತು. ಆದರೆ ಭಾರತ ಅದರಲ್ಲಿ ಕೇವಲ 4 ಪದಕಗಳನ್ನು ಮಾತ್ರ ಪಡೆದುಕೊಂಡಿದೆ. ಇದರಲ್ಲಿ ಕೊನೆಯ ಮೂರು ಪದಕಗಳು ಬಂದಿದ್ದು ಡಬಲ್ಸ್‌ನಲ್ಲಿ ಮಾತ್ರ. ಈಗ ಮೊದಲ ಬಾರಿಗೆ ಸಿಂಗಲ್ಸ್‌ನಲ್ಲಿ ಭಾರತಕ್ಕೆ ಪದಕ ಬಂದಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries