HEALTH TIPS

ಮಕ್ಕಳಲ್ಲಿ ರಕ್ತಹೀನತೆ ಪ್ರಮಾಣ ಶೇ 9ರಷ್ಟು ಹೆಚ್ಚಳ: ಆರೋಗ್ಯ ಸಮೀಕ್ಷೆ

 

              ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಆರು ತಿಂಗಳಿನಿಂದ 5 ವರ್ಷದೊಳಗಿನ ಮಕ್ಕಳಲ್ಲಿ ರಕ್ತಹೀನತೆ ಪ್ರಮಾಣ ಶೇಕಡ 9ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.

                  2015-16ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (ಎನ್‌ಎಫ್‌ಎಚ್‌ಎಸ್‌-4) ಪ್ರಕಾರ, ರಕ್ತಹೀನತೆಯಿಂದ ಬಳಲುವ ಮಕ್ಕಳ ಪ್ರಮಾಣ ಶೇಕಡ 58.6ರಷ್ಟಿತ್ತು. ಆದರೆ 2019-21ರ ಸಮೀಕ್ಷೆಯಲ್ಲಿ ಈ ಪ್ರಮಾಣ ಶೇಕಡ 67.1ಕ್ಕೆ ಏರಿಕೆಯಾಗಿದೆ.

                   ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು, 'ಎನ್‌ಎಫ್‌ಎಚ್‌ಎಸ್‌-5 ಪ್ರಕಾರ ಲಡಾಕ್‌ನಲ್ಲಿ 6 ತಿಂಗಳಿನಿಂದ 5 ವರ್ಷದೊಳಗಿನ ಮಕ್ಕಳಲ್ಲಿ ರಕ್ತಹೀನತೆ ಗರಿಷ್ಠ ಪ್ರಮಾಣದಲ್ಲಿದೆ(ಶೇ 90ರಷ್ಟು). ನಂತರದಲ್ಲಿ ಗುಜರಾತ್‌ (ಶೇ 80), ದಾದ್ರಾ ಮತ್ತು ನಗರ್‌ ಹವೇಲಿ, ದಾಮನ್‌ ಮತ್ತು ದಿಯು(ಶೇ 76), ಮಧ್ಯಪ್ರದೇಶ ಮತ್ತು ಜಮ್ಮು-ಕಾಶ್ಮೀರ (ಶೇ 73) ಮತ್ತು ಪಂಜಾಬ್‌ ಮತ್ತು ರಾಜಸ್ಥಾನ (ಶೇ 71) ಇದೆ ಎಂದು ತಿಳಿಸಿದ್ದಾರೆ.

                     ಇದೇ ವೇಳೆ ರಕ್ತಹೀನತೆ ಪ್ರಮಾಣ ಕಡಿಮೆ ಮಾಡಲು ಸರ್ಕಾರ ಪೋಷಣ್‌ ಅಭಿಯಾನವನ್ನು ಆರಂಭಿಸಿದೆ ಎಂದು ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries