HEALTH TIPS

ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಡೆಗಟ್ಟಲು ಬಲಗೊಂಡ ತಪಾಸಣೆ


             ಮಂಜೇಶ್ವರ: ನಿಷೇಧಿತ  ಏಕ-ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಪತ್ತೆಗಾಗಿ ಮಂಜೇಶ್ವರ ಗ್ರಾಮ ಪಂಚಾಯತಿಯು ಪರಿಶೀಲನೆಯನ್ನು ತೀವ್ರಗೊಳಿಸಿದೆ. ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ನಡೆಸಿದ ತಪಾಸಣೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಚೀಲ, ಲೋಟ, ಪಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯದರ್ಶಿ ಸಜಿ ಥಾಮಸ್, ಸಹಾಯಕರಾದ ಸೆಬಾಸ್ಟಿಯನ್ ಥಾಮಸ್, ಜಿಬಿನ್ ಲಾಲ್ ಮತ್ತು ಚರಣ್ ಕುಮಾರ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು. ಪ್ಲಾಸ್ಟಿಕ್ ಬದಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ವ್ಯಾಪಾರಿಗಳಿಗೆ ಸಲಹೆ ನೀಡಿದರು. ತಪಾಸಣೆ ಕಟ್ಟುನಿಟ್ಟಾಗಿ ಮುಂದುವರಿಯಲಿದ್ದು, ಒಂದು ಬಾರಿ ಮಾತ್ರ ಬಳಸುವ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯಿತಿ ಕಾರ್ಯದರ್ಶಿ ತಿಳಿಸಿದ್ದಾರೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries