HEALTH TIPS

35 ಕೋಟಿಗೂ ಹೆಚ್ಚು ದಂಡ ಸಂಗ್ರಹ: ಕೊರೊನಾ ನಿರ್ಬಂಧಗಳ ಉಲ್ಲಂಘನೆ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲು ಚಿಂತನೆ


              ತಿರುವನಂತಪುರ: ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಸಿದ್ಧತೆ ನಡೆಸಿದೆ.
           ಅತ್ಯಂತ ಗಂಭೀರ ಪ್ರಕರಣಗಳನ್ನು ಹೊರತುಪಡಿಸಿ ಉಳಿದೆಲ್ಲ ಪ್ರಕರಣಗಳನ್ನು ಹಿಂಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಅಂತಿಮ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಗಳು ಈ ತಿಂಗಳು ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಈವರೆಗೆ 35 ಕೋಟಿ ರೂಪಾಯಿಗೂ ಹೆಚ್ಚು ದಂಡ ವಸೂಲಿ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.
           ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಮಾಸ್ಕ್ ಧರಿಸದಿದ್ದಕ್ಕೆ 500 ರೂ. ಕೊರೊನಾ ನಿಬರ್ಂಧಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪೋಲೀಸರು 25,000 ರೂಪಾಯಿಗಳವರೆಗೆ ದಂಡವನ್ನು ವಿಧಿಸಿದ್ದರು. ನಿಯಮ ಉಲ್ಲಂಘಿಸಿದ ವಾಹನಗಳನ್ನು ಜಪ್ತಿ ಮಾಡಿ ದಂಡ ವಿಧಿಸಲಾಗಿತ್ತು.
            ಗಂಭೀರ ಅಪರಾಧ ಎಸಗಿದವರ ವಿರುದ್ಧ ಹಾಗೂ ದಂಡ ಕಟ್ಟಲು ವಿಫಲರಾದವರ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಲವು ಪ್ರಕರಣಗಳಲ್ಲಿ ದೋμÁರೋಪ ಪಟ್ಟಿ ಸಲ್ಲಿಸಲಾಗಿತ್ತು. ಕೆಲವು ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿವೆ. ನ್ಯಾಯಾಲಯದಲ್ಲಿ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳೇ ತನಿಖೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಕೇಂದ್ರ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ಪ್ರಕರಣವನ್ನು ಪರಿಶೀಲಿಸಿ ಹಿಂಪಡೆಯಬಹುದಾದ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾ ಪೋಲೀಸ್ ವರಿμÁ್ಠಧಿಕಾರಿಗಳಿಗೆ ಡಿಜಿಪಿ ಸೂಚಿಸಿದ್ದರು.
          ಸಣ್ಣಪುಟ್ಟ ಪ್ರಕರಣಗಳನ್ನು ಮಾತ್ರ ಹಿಂಪಡೆಯಲಾಗುವುದು. ಸಾಂಕ್ರಾಮಿಕ ಸಮಯದಲ್ಲಿ ಅಂಗಡಿಗಳನ್ನು ತೆರೆಯುವುದು, ಜನಸಂದಣಿಯನ್ನು ಸೃಷ್ಟಿಸುವುದು, ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳನ್ನು ನಡೆಸುವ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತದೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries