ಕುಂಬಳೆ: ತುಳು ಲಿಪಿ ಸಂಶೋಧಕ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳು ರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ ಅವರ ಜಯಂತಿ ಅಕ್ಟೋಬರ್ 10 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಸರೋವರ ದೇವಸ್ಥಾನ ಅನಂತಪುರದಲ್ಲಿ ಜರಗಲಿರುವುದು. ಕಾರ್ಯಕ್ರಮದ ಯಶಸ್ಸಿಗಾಗಿ ಸಮಾಲೋಚನಾ ಸಭೆ ಸೆ.16 ಶುಕ್ರವಾರ ಸಂಜೆ 4.30 ಕ್ಕೆ ಅನಂತಪುರ ದೇವಸ್ಥಾನ ಪರಿಸರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಅಭಿಮಾನಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಬೇಕಾಗಿ ವಿನಂತಿಸಲಾಗಿದೆ.