HEALTH TIPS

ನೊಯ್ಡಾ: ಹೌಸಿಂಗ್‌ ಸೊಸೈಟಿ ಗೋಡೆ ಕುಸಿದು ನಾಲ್ವರು ಕಾರ್ಮಿಕರ ಸಾವು

 

                 ನೊಯ್ಡಾ: ಇಲ್ಲಿನ ಹೌಸಿಂಗ್‌ ಸೊಸೈಟಿಯೊಂದರ ಆವರಣಗೋಡೆ ಕುಸಿದು ನಾಲ್ವರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ.

                    ದುರ್ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

                       'ನೊಯ್ಡಾದ ಸೆಕ್ಟರ್‌ 21ರಲ್ಲಿರುವ 'ಜಲ್‌ ವಾಯು ವಿಹಾರ್‌' ಹೌಸಿಂಗ್‌ ಸೊಸೈಟಿಯ ಬಳಿ ಚರಂಡಿ ಕಾಮಗಾರಿ ನಿರ್ವಹಿಸುತ್ತಿದ್ದಾಗ ಕಾರ್ಮಿಕರ ಮೇಲೆ ಆವರಣಗೋಡೆ ಕುಸಿದಿದೆ. ಈ ವೇಳೆ 12 ಮಂದಿ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಟು ಮಂದಿಯನ್ನು ರಕ್ಷಿಸಿದ್ದಾರೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                     ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದೂ ಹೇಳಿದ್ದಾರೆ. ಕಾರ್ಮಿಕರನ್ನು ಕರೆತಂದಿದ್ದ ಗುತ್ತಿಗೆದಾರ ಗುಲ್‌ ಮೊಹಮ್ಮದ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries