HEALTH TIPS

ಸಿರಿಬಾಗಿಲು ವೆಂಕಪ್ಪಯ್ಯ ಸ್ಮಾರಕ ಭವನದಲ್ಲಿ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ

                    ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ವೆಂಕಪ್ಪಯ್ಯ ಸಾಂಸ್ಕøತಿಕ ಭವನದಲ್ಲಿ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವ ವಿದ್ಯಾಲಯದ ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿಕರ್ದೇಶ ಶ್ರೀಪತಿ ಕಲ್ಲೂರಾಯ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಯಕ್ಷಗಾನದ ಬೆಳವಣಿಗೆಗೆ ವಿಶಿಷ್ಟ ಕೊಡುಗೆ ನೀಡುವಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಸಿರಿಬಾಗಿಲು ವೆಂಕಪ್ಪಯ್ಯ ಸ್ಮಾರಕ ಕೇಂದ್ರ ಯಕ್ಷಗಾನದ ವಿಶ್ವ ವಿದ್ಯಾಲಯವಾಗಲಿ ಎಂದು ಹಾರೈಸಿದರು.   
            ಡಾ. ಜಯಪ್ರಕಾಶ್ ನಾರಾಯಣ್ ತೊಟ್ಟೆತ್ತೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯ ಅಧಿಕಾರಿ ಮುಕೇಶ್, ನಿವೃತ್ತ ಮುಖ್ಯ ಶಿಕ್ಷಕ ಎಸ್.ಎನ್ ರಾಮಶೆಟ್ಟಿ, ಜಯರಾಂ ರೈ ಸಿರಿಬಾಗಿಲು ಉಪಸ್ಥಿತರಿದ್ದರು.
             ಪ್ರತಿಷ್ಠಾನ ಅಧ್ಯಕ್ಷ ರಾಮಕೃಷ್ಣ ಮಯ್ಯ ಸ್ವಾಗತಿಸಿದರು. ಪ್ರಾಧ್ಯಾಪಕ ರಆಜಾರಮ ರಾವ್ ಮೀಯಪದವು ಕಾರ್ಯಕ್ರಮ ನಿರೂಪಿಸಿದರು. ಜಗದೀಶ್ ಕೂಡ್ಲು ವಂದಿಸಿದರು. ಯಕ್ಷಗಾನ ನಾಟ್ಯಗುರು, ಕಟೀಲು ಮೇಳದ ಪ್ರಸಿದ್ಧ ಕಲಾವಿದ ಲಕ್ಷ್ಮಣ ಕುಮಾರ್ ಮರಕಡ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸವಸಹಾಯ ಸಂಘಗಳಾದ ಶ್ರೀ ಮಂಜುನಾಥ ಸ್ವಸಹಾಯ ಸಂಘ ಮತ್ತು ನೇತ್ರಾವತೀ ಸವಸಹಾಯ ಸಂಘಗಳ ದಶಮಾನೋತ್ಸವ ಕಾರ್ಯಕ್ರಮ ಜರುಗಿತು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries