HEALTH TIPS

ಓಮೈಕ್ರಾನ್‌ನ ಬಿಎಫ್‌.7 ಉಪತಳಿ: ದೇಶದಲ್ಲಿ 4 ಪ್ರಕರಣಗಳು ಪತ್ತೆ

 

           ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ ಓಮೈಕ್ರಾನ್‌ನ ಉಪತಳಿ ಬಿಎಫ್‌.7 ಸೋಂಕಿನ ನಾಲ್ಕು ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

                   ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ.

ಗುಜರಾತ್‌ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣಗಳನ್ನು ಪತ್ತೆ ಮಾಡಿತು. ಎರಡು ಮತ್ತು ಮೂರನೇ ಪ್ರಕರಣವೂ ಗುಜರಾತ್‌ನಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಪ್ರಕರಣ ಒಡಿಶಾದಲ್ಲಿ ವರದಿಯಾಗಿದೆ.

                     ಚೀನಾದಲ್ಲಿ ಸದ್ಯ ಅಧಿಕ ಸಂಖ್ಯೆಯಲ್ಲಿ ಕೋವಿಡ್‌-19 ಪ್ರಕರಣಗಳು ವರದಿಯಾಗುತ್ತಿರುವುದಕ್ಕೆ ವೈರಸ್‌ನ ಈ ಬಿಎಫ್‌.7 ಉಪತಳಿಯೇ ಕಾರಣ ಎಂದು ಮೂಲಗಳು ತಿಳಿಸಿವೆ.

                                     'ಮಧುಮೇಹಿಗಳಿಗೆ ಮಾಸ್ಕ್‌ ಕಡ್ಡಾಯ'

                'ಕೋವಿಡ್‌-19 ಕುರಿತು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಮಧುಮೇಹ, ಅಧಿಕ ರಕ್ತದೊತ್ತಡ ಇರುವವರು (ಕೋಮಾರ್ಬಿಡಿಟಿ), ವಯಸ್ಸಾದವರು ಜನಜಂಗುಳಿ ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು' ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪೌಲ್‌ ಸಲಹೆ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries