HEALTH TIPS

ಕೈಗಾರಿಕಾ ಉತ್ಪನ್ನಗಳ ಪ್ರದರ್ಶನ, ಮಾರುಕಟ್ಟೆ ಮೇಳ-ಉದ್ಯಮಿಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ               ಕಾಸರಗೋಡು: ಉದ್ಯಮ ವರ್ಷಕ್ಕೆ ಸಂಬಂಧಿಸಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾಸರಗೋಡು ತಾಲೂಕು ಮಟ್ಟದಲ್ಲಿ ಕೈಗಾರಿಕಾ ಉತ್ಪನ್ನಗಳ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳವನ್ನು ನಡೆಸಲಿದೆ. 2023 ರ ಜನವರಿ 12 ರಿಂದ 15 ರವರೆಗೆ ತಳಂಗರೆ ಮಾಲಿಕ್ ದಿನಾರ್ ಮಸೀದಿಯ ಉರುಸ್ ಕಾರ್ಯಕ್ರಮದ ಅಂಗವಾಗಿ ಮೇಳ ನಡೆಯಲಿದೆ.
        ಕಾಸರಗೋಡು ಮತ್ತು ಮಂಜೇಶ್ವರ ಕಂದಾಯ ತಾಲೂಕುಗಳ ಕೈಗಾರಿಕೋದ್ಯಮಿಗಳು ತಮ್ಮ ಉತ್ಪನ್ನಗಳಾದ ಆಹಾರ ಸಂಸ್ಕರಣೆ, ಬಟ್ಟೆ, ಕಟ್ಟಡ ನಿರ್ಮಾಣ ಸಾಂಗ್ರಿ, ಪ್ಲಾಸ್ಟಿಕ್, ಯಂತ್ರೋಪಕರಣಗಳ ತಯಾರಿಕೆ, ಕರಕುಶಲ ವಸ್ತುಗಳು, ಕೈಮಗ್ಗ ಮುಂತಾದ ವಿವಿಧ ಉತ್ಪನ್ನಗಳನ್ನು ಮೇಳದಲ್ಲಿ ಪ್ರದರ್ಶಿಸಲಿದ್ದಾರೆ. ಈ ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಆಸಕ್ತಿ ಹೊಂದಿರುವ ಉದ್ಯಮಿಗಳು ಡಿಸೆಂಬರ್ 28 ರ ಮೊದಲು ಆನ್‍ಲೈನ್ ಯಾ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಆಯಾ ಗ್ರಾಮ, ಬ್ಲಾಕ್ ಪಂಚಾಯಿತಿಯ ಕೈಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಕಾಸರಗೋಡು ತಾಲೂಕು ಕೈಗಾರಿಕೆಗಳ ಕಛೇರಿಯಿಂದ ಪಡೆಯಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994 256110)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


Qries