HEALTH TIPS

ರೋಸ್ಗಾರ್ ಮೇಳ: ದೇಶದ ಪ್ರಗತಿಗೆ ಶ್ರಮಿಸಬೇಕು; ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್


                ಕೊಚ್ಚಿ: ನವೀನ ಆಲೋಚನೆಗಳು ಮತ್ತು ಕಲ್ಪನೆಯನ್ನು ಬಳಸಿಕೊಂಡು ಯುವಕರು ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ ಕರದ್ ಅವರು ಕರೆ ನೀಡಿದರು.
          10 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೂರನೇ ಹಂತದ ರೋಸ್ಗಾರ್ ಮೇಳದ ಅಂಗವಾಗಿ ಕೊಚ್ಚಿಯಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
      , ಯುವಜನತೆ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಉತ್ತಮ ಫಲಿತಾಂಶವನ್ನು ತರಬೇಕು ಎಂದು ಸಲಹೆ ನೀಡಿದರು. ಸಮಾರಂಭದಲ್ಲಿ ಹೊಸದಾಗಿ ನೇಮಕಗೊಂಡ 88 ಮಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.
           ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೋಸ್ಗಾರ್ ಮೇಳವನ್ನು ಉದ್ಘಾಟಿಸಿದರು ಮತ್ತು ನೇಮಕಗೊಂಡವರೊಂದಿಗೆ ಸಂವಾದ ನಡೆಸಿದರು. ರೈಲ್ವೆ, ವಿಎಸ್.ಎಸ್.ಇ., ಇಪಿಎಫ್ ಒ, ಎನ್ ಎಸ್ ಒ, ಅಂಚೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ನೇಮಕಾತಿ ಒದಗಿದವರಿಗೆ ಪತ್ರ ವಿತರಿಸಲಾಯಿತು. ಕೇರಳದ ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತ ಡಾ.ಜಿ.ವಿ. ಹೇಮಲತಾದೇವಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು
         ತಿರುವನಂತಪುರಂ ಪ್ರದೇಶದಿಂದ ನೇಮಕಗೊಂಡ 108 ಜನರಲ್ಲಿ ಆಯ್ಕೆಯಾದ 25 ಮಂದಿ ತಿರುವನಂತಪುರದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅವರಿಂದ ನೇಮಕಾತಿ ಆದೇಶಗಳನ್ನು ಸ್ವೀಕರಿಸಿದರು. ಉಳಿದವರಿಗೆ ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳು ಆದೇಶ ವಿತರಿಸಿದರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries