HEALTH TIPS

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು ಇಳಿಕೆ

 

                 ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 175 ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಪ್ರಮಾಣ 2,570 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

                ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದು ದಿನದಲ್ಲಿ 12 ರಷ್ಟು ಕಡಿಮೆಯಾಗಿದ್ದರೆ, ಒಟ್ಟು ಸೋಂಕಿನ ಪ್ರಮಾಣ ಶೇ.0.01 ಕುಂಠಿತಗೊಂಡಿದೆ.

                  ಭಾರತದಾದ್ಯಂತ ನಡೆದ ಕೋವಿಡ್ -19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 220.11 ಕೋಟಿ ಲಸಿಕೆ ನೀಡಲಾಗಿದ್ದು, ಚೇತರಿಕೆ ದರವು ಶೇ 98.80 ರಷ್ಟು ಹೆಚ್ಚಾಗಿದೆ.

                ಕೋವಿಡ್ -19ರಿಂದ ಚೇತರಿಸಿಕೊಂಡವರ ಪ್ರಮಾಣ 4,41,45,854 ಕ್ಕೆ ಏರಿಕೆಯಾಗಿದೆ. ಆದರೆ ಪ್ರಕರಣಗಳ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries