HEALTH TIPS

ರಾಷ್ಟ್ರೀಯ ಹೆದ್ದಾರಿಗಳ ಗುಂಟ ಒಎಫ್‌ಸಿ ಕೇಬಲ್ ಅಳವಡಿಕೆ: ರಸ್ತೆ ಸಾರಿಗೆ ಸಚಿವಾಲಯ

 

           ನವದೆಹಲಿ: ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರ ಕಿ.ಮೀ. ಉದ್ದದಷ್ಟು ರಾಷ್ಟ್ರೀಯ ಹೆದ್ದಾರಿಗುಂಟ ಆಪ್ಟಿಕಲ್‌ ಫೈಬರ್‌ ಕೇಬಲ್ (ಒಎಫ್‌ಸಿ) ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಯೋಜನೆ ರೂಪಿಸಿದೆ.

               ₹ 6 ಸಾವಿರ ಕೋಟಿಗೂ ಅಧಿಕ ವೆಚ್ಚದ ಈ ಯೋಜನೆಗೆ ಸಚಿವಾಲಯವು ಟೆಂಡರ್‌ ಆಹ್ವಾನಿಸಿದೆ. ಪ್ರಾಯೋಗಿಕವಾಗಿ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ₹ 500 ಕೋಟಿ ವೆಚ್ಚದಲ್ಲಿ ಒಎಫ್‌ಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

               ರಾಷ್ಟ್ರೀಯ ಬ್ರಾಡ್‌ಬ್ಯಾಂಡ್‌ ಕಾರ್ಯಕ್ರಮದ ಅಂಗವಾಗಿ ಈ ಬೃಹತ್‌ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಬರುವ ದಿನಗಳಲ್ಲಿ ದೇಶದಲ್ಲಿ 5ಜಿ ಸೇವೆ ಹೆಚ್ಚು ಬಳಕೆಯಾಗುವ ನಿರೀಕ್ಷೆ ಇದ್ದು, ಒಎಫ್‌ಸಿ ಅಳವಡಿಕೆ ಇದಕ್ಕೆ ಪೂರಕವಾಗಿರಲಿದೆ ಎಂದು ಸಚಿವಾಲಯ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries