ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 29, 2017
ಕನ್ನಡ ರಾಜ್ಯೋತ್ಸವ: ನವೆಂಬರ್-1 ರಂದು
ಕನ್ನಡ ರಾಜ್ಯೋತ್ಸವ ಅಥವಾ ಕನರ್ಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕನರ್ಾಟಕ) 1956ರ ನವೆಂಬರ್ 1ರಂದು ನಿಮರ್ಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕನರ್ಾಟಕ ರಾಜ್ಯದಲ್ಲಿ ಸಕರ್ಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕನರ್ಾಟಕ ಸಕರ್ಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ
*ಇತಿಹಾಸ*
ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್, ಕನರ್ಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪು ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕನರ್ಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕನರ್ಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು "ಕನರ್ಾಟಕ" ಎಂದು ಬದಲಾಯಿತು.ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕನರ್ಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ್ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಎ.ಎನ್. ಕೃಷ್ಣರಾವ್ ಮತ್ತು ಬಿ.ಎಂ. ಶ್ರೀಕಂಟಯ್ಯ .
*ಆಚರಣೆಗಳು*
ರಾಜ್ಯೋತ್ಸವ ದಿನವನ್ನು ಕನರ್ಾಟಕ ರಾಜ್ಯಾದ್ಯ0ತ ಮಹದಾನ0ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ ("ಜಯ ಭಾರತ ಜನನಿಯ ತನುಜಾತೆ")ಯನ್ನು ಹಾಡಲಾಗು ತ್ತದೆ. ಸಕರ್ಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.ರಾಜ್ಯೋತ್ಸವವನ್ನು ಕನರ್ಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸಕರ್ಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸಕರ್ಾರ ಕನರ್ಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.ರಾಜ್ಯೋತ್ಸವದ ಪ್ರಯುಕ್ತ ಕನರ್ಾಟಕ ಸಕರ್ಾರದವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.ಕನರ್ಾಟಕದಲ್ಲಿನ ಇನ್ನಿತರ ಪ್ರದೇಶಗಳಾದ ಮುಂಬಯಿ, ದೆಹಲಿ ಮುಂತಾದ ಕಡೆಯು ಕನರ್ಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಗುರಗಾಂವ್ಮತ್ತು ಚೆನೈ, ಸಾಗರೋತ್ತರದಲ್ಲಿ ಕನ್ನಡ ಸಂಸ್ಥೆ, ಅಮೇರಿಕಾದ, ಸಿಂಗಾಪುರ್, ದುಬೈ , ಮಸ್ಕಟ್, ದಕ್ಷಿಣ ಕೊರಿಯಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಸ್ಕಾಟ್ಲೆಂಡ್ ಮತ್ತು ಐಲರ್ೆಂಡ್ ಮೊದಲಾದ ಕಡೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನರ್ಾಟಕ ರಾಜ್ಯೋತ್ಸವ ಆಚರಿಸುತ್ತಾರೆ.
*ಆಚರಣೆಯ ತಿಂಗಳು*
ನವೆಂಬರ್ 1 ರಂದು ಅಧಿಕೃತವಾಗಿ ಕನ್ನಡರಾಜ್ಯೋತ್ಸವವು ಆಚರಣೆಯಾದರೂ, ನವೆಂಬರ್ ತಿಂಗಳ ಮೊದಲ ದಿನ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ನವೆಂಬರ್ 1 ಸಾರ್ವಜನಿಕ ರಜೆ ಇರುತ್ತದೆ. ಈ ದಿನಗಳಲ್ಲಿ ಕನ್ನಡ ಬಾವುಟ ಸಕರ್ಾರದ ಪ್ರಮುಖ ಕಛೇರಿಯ ಮೇಲೆ ಎಲ್ಲೆಲ್ಲಿಯೂ ಹಾರಾಡುತ್ತಿರುತ್ತದೆ.
ಗಡಿನಾಡಿಗೆ ಕರಾಳತೆ:
ಮಂಗಳೂರು ಪ್ರಾಂತ್ಯದ ಭಾಗವೇ ಆಗಿದ್ದು, ಬಳಿಕ ಮಂಗಳೂರಿನ ಜೊತೆಗೆ ಮದ್ರಾಸು ಪ್ರಾಂತ್ಯಕ್ಕೆ ಸೇರಲ್ಪಟ್ಟಿದ್ದ ಗಡಿನಾಡು ಕಾಸರಗೋಡು ಭಾಷಾವಾರು ಪ್ರಾಂತ್ಯ ವಿಭಜನೆಯ ವೇಳೆ ಅನ್ಯಾಯವಾಗಿ ಕೇರಳದ ಪಾಲಾದುದು ದುರಂತ. ಅಂದಿನ ಮಲೆಯಾಳಿ ಮುಖಂಡರು ಕೇಂದ್ರ ಸರಕಾರದೊಂದಿಗೆ ಇರಿಸಿದ್ದ ನಿಕಟತೆಯನ್ನು ದುರ್ಬಳಕೆಗೊಳಿಸಿ ಕಾಸರಗೋಡನ್ನು ಕನ್ನಡ ನೆಲದಿಂದ ಕಿತ್ತುಕೊಳ್ಳುವಲ್ಲಿ ಯಶಸ್ವಿಯಾಯಿತು. ಜೊತೆಗೆ ಗಡಿನಾಡಿನ ಅಂದಿನ ಮುಖಂಡರಲ್ಲಿದ್ದ ಮೌಢ್ಯತೆ ಮತ್ತು ಭಾಷಾ ಪ್ರೇಮದ ಕೊರತೆಯಂತಹ ಕಾರಣಗಳೂ ಮಲೆಯಾಳಿಗರ ಬೇಡಿಕೆ ಪೂರೈಕೆಗೆ ಬಲ ನೀಡಿತು. ಬಳಿಕ ಹೊತ್ತಿಕೊಂಡ ಹೋರಾಟ ಪರಿಣಾಮ ಸಾಂವಿಧಾನಿಕ ಹಕ್ಕುಗಳು ಗಡಿನಾಡಿನ ಅಲ್ಪಸಂಖ್ಯಾತ ಕನ್ನಡಿಗರಿಗೆ ದಕ್ಕಿದರೂ ಅದು ಜಾರಿಗೊಳ್ಳುವಲ್ಲಿ ಅರಿವಿನ ಕೊರತೆ ಮತ್ತು ನಿರಾಸಕ್ತಿಯ ಕಾರಣ ಮಲೆಯಾಳದ ಕನ್ನಡ ಧಮನಕಾರಿ ನೀತಿ ಮುಂದುವರಿಯುತ್ತಲೇ ಇದೆ. ಈ ಕಾರಣದಿಂದ ನವಂಬರ್ 1 ಗಡಿನಾಡು ಕಾಸರಗೊಡಿನ ಪಾಲಿಗೆ ಕರಾಳ ದಿನವಾಗಿ ಆಚರಿಸಲ್ಪಡುತ್ತಿದೆ.





