ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 26, 2017
ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ
ಕಾಸರಗೋಡು: ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆಯ ಪ್ರಯುಕ್ತ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ನವಂಬರ್ 1 ರಂದು ಬೆಳಗ್ಗೆ 10 ರಿಂದ ಕನ್ನಡ ರಾಜ್ಯೋತ್ಸವ ಬಹು`ಾಷಾ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನರ್ಾಟಕ ಸರಕಾರ ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಜಿಲ್ಲಾ ಜಾಗೃತಿ ಸಮಿತಿ ಕೋಟೆಕಣಿ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಬಹುಭಾಷಾ ಕವಿಗೋಷ್ಠಿ ಮತ್ತು ಚುಟುಕು ಕವಿಗೋಷ್ಠಿಯಲ್ಲಿ ಕವಿತೆಗಳನ್ನು ವಾಚಿಸಲು ಇಚ್ಚಿಸುವವರು ತಮ್ಮ ಸ್ವರಚಿತ ಕವನಗಳನ್ನು ಮತ್ತು ಚುಟುಕುಗಳೊಂದಿಗೆ ನೇರವಾಗಿ ಕನ್ನಡ ಗ್ರಾಮದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿಯಲ್ಲಿ `ಾಗವಹಿಸಿ ವಾಚಿಸಲು ಅವಕಾಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9448572016 ನಂಬ್ರದಲ್ಲಿ ಸಂಪಕರ್ಿಸಲು ತಿಳಿಸಲಾಗಿದೆ.

