HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕನ್ನಡ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾಸರಗೋಡು: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 27 ನೇ ಸಂಸ್ಥಾಪನಾ ವಷರ್ಾಚರಣೆಯ ಪ್ರಯುಕ್ತ ನಡೆಯಲಿರುವ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಕಾಸರಗೋಡು ಮೀಪುಗುರಿ ಪಾರೆಕಟ್ಟೆ ಕನ್ನಡ ಗ್ರಾಮದಲ್ಲಿ ನ.1 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಕನ್ನಡ ಪರ ಸಾಹಿತ್ಯಿಕ - ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಳ್ಳಲಾಗಿದೆ. ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನರ್ಾಟಕ ಸರಕಾರ ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಕೋಟೆಕಣಿ ಇದರ ಸಹಯೋಗದಲ್ಲಿ ನಡೆಯಲಿದೆ. ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವದಂದು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕಾಸರಗೊಡು ಜಿಲ್ಲೆಯಾದ್ಯಂತ ಕನ್ನಡ ಪರ ಸಂಘ ಸಂಸ್ಥೆಗಳಲ್ಲಿ ಕನ್ನಡಿಗರು ಸ್ವಯಂ ಪ್ರೇರಿತರಾಗಿ ಕನ್ನಡ ಪ್ರತಿಜ್ಞೆಯನ್ನು ಕೈಗೊಳ್ಳಬೇಕೆಂದು ವಿನಂತಿಸಲಾಗಿದೆ. ಕಳೆದ 25 ವರ್ಷಗಳಿಂದ ನಿರಂತರವಾಗಿ ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕನ್ನಡ ರಾಜ್ಯೋತ್ಸವ ಮತ್ತು ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕಾರ್ಯಕ್ರಮದಲ್ಲಿ ನವಂಬರ್ 1 ರಂದು `ಕನ್ನಡ ನನ್ನ ಭಾಷೆ, ಕನ್ನಡ ಸಂಸ್ಕೃತಿಗೆ ನಾನು ಅಭಿಮಾನ ಪಡುತ್ತೇನೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ನಾನು ಗೌರವಿಸುತ್ತೇನೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಾನು ಸದಾ ಸಿದ್ಧನಿದ್ದೇನೆ. ಸಿರಿಗನ್ನಡಂ ಗೆಲ್ಗೆ-ಸಿರಿಗನ್ನಡಂ ಬಾಳ್ಗೆ' ಎಂಬ ಕನ್ನಡ ಪ್ರತಿಜ್ಞೆಯನ್ನು ಕೈಗೊಂಡು ಸ್ವಯಂ ಪ್ರೇರಿತರಾಗಿ `ಾಗವಹಿಸುವಂತೆ ಕೇಳಿಕೊಳ್ಳಲಾಗಿದೆ. ಕೇರಳ ಸರಕಾರವು ರಾಜ್ಯಗಳನ್ನು ಕೇಂದ್ರೀಕರಿಸಿ ಕಾಸರಗೋಡಿನಲ್ಲಿ ಪ್ರತ್ಯೇಕ ಅಸ್ತಿತ್ವವುಳ್ಳ ಕೇರಳ ಕನ್ನಡ ಅಕಾಡೆಮಿಯನ್ನು ಸ್ಥಾಪಿಸಬೇಕು ಹಾಗೂ ಕನ್ನಡ `ಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಮಗ್ರವಾದ ಸಾಂಸ್ಕೃತಿಕ ಕನ್ನಡೀಕರಣ ಯೋಜನೆಯೊಂದನ್ನು ಸಿದ್ಧಪಡಿಸಿ ಮುಂದಿನ ಬಜೆಟ್ನಲ್ಲಿ ಕೇರಳ ಸರಕಾರವು ಕನ್ನಡ ಅಭಿವೃದ್ಧಿಗಾಗಿ ಸಾಂಸ್ಕೃತಿಕ ನಿಯೊಂದನ್ನು ಸ್ಥಾಪಿಸಿ ಘೋಷಿಸಬೇಕೆಂಬ ನಿರ್ಣಯವನ್ನು ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಕೇರಳ ಮತ್ತು ಕನರ್ಾಟಕ ಸರಕಾರದ ಮುಖ್ಯಮಂತ್ರಿಗಳಿಗೆ ಕೇರಳ ರಾಜ್ಯ ಸಹಿತ ಕಾಸರಗೋಡು ಜಿಲ್ಲೆಯ ಕನ್ನಡಿಗರ ವಿವಿಧ ಬೇಡಿಕೆಗಳ ಮನವಿಯನ್ನು ಸಮಪರ್ಿಸಲಾಗುವುದು ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅ`್ಯಕ್ಷ ಶಿವರಾಮ ಕಾಸರಗೋಡು, ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಅಧ್ಯಕ್ಷ ಸತ್ಯನಾರಾಯಣ ಅಮೈ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries