ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 24, 2017
ಬೆಳ್ಳೂರು ಶಾಲೆಯಲ್ಲಿ ನವಪ್ರಭಾ ಕಾರ್ಯಕ್ರಮ ಉದ್ಘಾಟನೆ
ಮುಳ್ಳೇರಿಯ: ಕೇರಳ ರಾಜ್ಯ ಸರಕಾರ ನಡೆಸುವ 9 ನೇ ತರಗತಿಯ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಬೇತಿಯನ್ನು ನೀಡುವ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ "ನವಪ್ರಭಾ" ಎಂಬ ಕಾರ್ಯಕ್ರಮವನ್ನು ಬೆಳ್ಳೂರು ಸರಕಾರಿ ಹೈಸ್ಕೂಲಿನಲ್ಲಿ ಸೋಮವಾರ ಶಿಕ್ಷಕಿ ನೆಜುಮುನ್ನೀಸಾ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಎಲ್ಲಾ ವಿದ್ಯಾಥರ್ಿಗಳಿಗೂ ಸಮಾನ ಶಿಕ್ಷಣ ಲಭಿಸಬೇಕಾಗಿರುವುದು ಮಕ್ಕಳ ಹಕ್ಕು ಆಗಿದ್ದು, ವಿವಿಧ ಕಾರಣಗಳಿಂದ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರುತಿಸಿ ವಿಶೇಷ ತರಬೇತಿ ನಿಡುವುದು ಅಗತ್ಯವಿದೆ ಎಂದು ತಿಳಿಸಿದರು. ಸರಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಕಳಕಳಿಯಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ವಿದ್ಯಾಥರ್ಿಗಳು ಗರಿಷ್ಠ ಮಟ್ಟದ ಪ್ರಯೋಜನ ಪಡೆಯಬೇಕು ಎಂದು ಈ ಸಂದರ್ಭ ಸಲಹೆ ನೀಡಿದರು.
ಶಿಕ್ಷಕ ಮೋಹನನ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಜಯರಾಮ ರೈ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭಹಾರೈಸಿದರು. ಶಿಕ್ಷಕಿ ವನಿತಾ ಟಿ.ಆರ್ ಸ್ವಾಗತಿಸಿ, ಶಿಕ್ಷಕಿ ಶೋಭಾ ವಂದಿಸಿದರು.





