ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 23, 2017
ತನಿಖೆಯಿಂದ ರಕ್ಷಿಸಲು ಸುಗ್ರೀವಾಜ್ಞೆ
ಜೈಪುರ: ಹಾಲಿ ಮತ್ತು ನಿವೃತ್ತ ನ್ಯಾಯಾಧೀಶರು, ಮ್ಯಾಜಿಸ್ಟ್ರೇಟ್ಗಳು ಮತ್ತು ಸಕರ್ಾರಿ ಅಧಿಕಾರಿಗಳನ್ನು ತನಿಖೆಗಳಿಂದ ರಕ್ಷಿಸುವುದಕ್ಕಾಗಿ ರಾಜಸ್ಥಾನದ ವಸುಂಧರಾ ರಾಜೇ ಸಕರ್ಾರ ಹೊಸ ಸುಗ್ರೀವಾಜ್ಞೆ ಹೊರಡಿಸಿದೆ.
ಇದರ ಪ್ರಕಾರ, ಅಧಿಕಾರಿಗಳು, ನ್ಯಾಯಾಧೀಶರು ಕರ್ತವ್ಯದಲ್ಲಿದ್ದಾಗ ತೆಗೆದುಕೊಂಡ ಕ್ರಮಗಳ ಬಗ್ಗೆ ಅಥವಾ ಅವರ ವಿರುದ್ಧ ಕೇಳಿ ಬಂದ ಆರೋಪಗಳ ಬಗ್ಗೆ ಸಕರ್ಾರದ ಅನುಮತಿ ಇಲ್ಲದೇ ತನಿಖೆ ನಡೆಸುವಂತಿಲ್ಲ.
ಅಲ್ಲದೇ, ಸಕರ್ಾರ ತನಿಖೆಗೆ ಅನುಮತಿ ನೀಡುವವರೆಗೆ ಆರೋಪಗಳ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳಿಗೂ ಈ ಸುಗ್ರೀವಾಜ್ಞೆ ನಿರ್ಬಂಧ ಹೇರುತ್ತದೆ. `ಕ್ರಿಮಿನಲ್ ಕಾನೂನುಗಳು (ರಾಜಸ್ಥಾನ) (ತಿದ್ದುಪಡಿ) ಸುಗ್ರೀವಾಜ್ಞೆ ?2017' ಅನ್ನು ಹೊರಡಿಸಿ ಸೆಪ್ಟೆಂಬರ್ 7ರಂದು ರಾಜಸ್ಥಾನ ಸಕರ್ಾರ ಅಧಿಸೂಚನೆ ಹೊರಡಿಸಿದೆ. ಆರೋಪ ಕೇಳಿ ಬಂದವರ ವಿರುದ್ಧ ತನಿಖೆ ನಡೆಸಬೇಕೇ ಬೇಡವೇ ಎಂದು ನಿಧರ್ಾರ ಕೈಗೊಳ್ಳಲು ಸಕರ್ಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ಇದು ನೀಡುತ್ತದೆ.
`ಹಾಲಿ ಅಥವಾ ನಿವೃತ್ತ ನ್ಯಾಯಾಧೀಶ ಅಥವಾ ಮ್ಯಾಜಿಸ್ಟ್ರೇಟ್ ಅಥವಾ ಸಕರ್ಾರಿ ಅಧಿಕಾರಿ ವಿರುದ್ಧ ಯಾವುದೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸುವಂತಿಲ್ಲ, ಇಲ್ಲವೇ ತನಿಖೆ ನಡೆಸುವಂತಿಲ್ಲ' ಎಂದು ಸುಗ್ರೀವಾಜ್ಞೆಯಲ್ಲಿ ಹೇಳಲಾಗಿದೆ.
ಒಂದು ವೇಳೆ, ನಿಗದಿತ ಸಮಯದ ಒಳಗಾಗಿ (ಆರು ತಿಂಗಳು) ಸಕರ್ಾರ ತನಿಖೆಯ ಬಗ್ಗೆ ಅಧಿಕೃತವಾಗಿ ನಿಧರ್ಾರ ಕೈಗೊಳ್ಳದೇ ಹೋದರೆ, ತನಿಖೆ ನಡೆಸಲು ಸಕರ್ಾರ ಅನುಮತಿ ನೀಡಿದೆ ಎಂದರ್ಥ.
ಯಾವುದೇ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಕರ್ಾರಿ ಅಧಿಕಾರಿಗಳ ಹೆಸರು, ವಿಳಾಸ, ಅವರ ಕುಟುಂಬದ ವಿವರಗಳು ಮತ್ತು ಅವರ ಛಾಯಾಚಿತ್ರಗಳನ್ನು ಪ್ರಕಟಿಸುವುದು ಅಥವಾ ಮುದ್ರಿಸುವುದಕ್ಕೂ ಸುಗ್ರೀವಾಜ್ಞೆ ನಿಷೇಧ ಹೇರುತ್ತದೆ.
ನಿಯಮ ಉಲ್ಲಂಘಿಸಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದಕ್ಕೂ ಇದರಲ್ಲಿ ಅವಕಾಶ ಇದೆ




