ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 23, 2017
ವಿಜ್ಞಾನ ಮೇಳಗಳಿಂದ ವಿದ್ಯಾಥರ್ಿಗಳ ಪ್ರತಿಭೆ ಅನಾವರಣಗೊಳ್ಳುವುದು-ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಜಾಕ್
ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನ, ಸಮಾಜ ವಿಜ್ಞಾನ, ಗಣಿತ, ಐ.ಟಿ ಮತ್ತು ವೃತ್ತಿ ಮೇಳಗಳ ಉದ್ಘಾಟನೆಯು ಸೋಮವಾರ ಮೀಯಪದವು ಶ್ರೀವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.
ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಜಾಕ್ ವಿಜ್ಞಾನ ಮೇಳ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಮೇಳಗಳಿಂದ ವಿದ್ಯಾಥರ್ಿಗಳ ಪ್ರತಿಭೆ ಅನಾವರಣಗೊಳ್ಳುವುದೆಂದು ಅವರು ಅಭಿಪ್ರಾಯ ಪಟ್ಟರು. ಜೊತೆಗೆ ಹೈಯರ್ ಸೆಕೆಂಡರಿ ಶಾಲೆಗೆ 6 ಗಣಕ ಯಂತ್ರಗಳನ್ನು ನೀಡುವ ಬಗ್ಗೆ ಅವರು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್. ವಿ ಮಾತನಾಡಿ ವಿಜ್ಞಾನ ಮೇಳದ ಬಗ್ಗೆ ಪೂರ್ಣ ಮಾಹಿತಿಯನ್ನು ಒದಗಿಸಿದರು. ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶಂಶಾದ್ ಶುಕೂರ್ ಅಧ್ಯಕ್ಷತೆ ವಹಿಸಿದ್ದು ಡಾ.ಡಿ.ಸಿ ಚೌಟ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮೀಂಜ ಗ್ರಾಮ ಪಂಚಾಯತು ಸದಸ್ಯ ಕೃಷ್ಣಾ, ಮೊಹಮ್ಮದ್ ಎಂ, ವಹೀದ್.ಕೆ ,ಹೈಯರ್ ಸೆಕೆಂಡರಿ ವಿಭಾಗದ ಸಂಚಾಲಕಿ ಟಿ. ಪ್ರೇಮಾಭಟ್, ಹಿರಿಯ ಪ್ರಾಥಮಿಕ ವಿಭಾಗದ ಸಂಚಾಲಕಿ ರಾಜೇಶ್ವರಿ ರಾವ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಸದಾಶಿವ ರಾವ್ ಟಿ.ಡಿ, ಜೀನತ್ ಮತ್ತು ಉಪಾಧ್ಯಕ್ಷರಾದ ಮೊಹಮ್ಮದ್ ಉಪಸ್ಥಿತರಿದ್ದರು. ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಭಟ್ ಸ್ವಾಗತಿಸಿ ಅಧ್ಯಾಪಕರಾದ ರಾಜಾರಾಂ ರಾವ್ ವಂದಿಸಿದರು. ಅರವಿಂದಾಕ್ಷ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.








