ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 27, 2017
ಆಧಾರ್ ಇಲ್ಲದಿದ್ದರೆ ಪಡಿತರ ನಿರಾಕರಿಸುವಂತಿಲ್ಲ
ದೆಹಲಿ: ಆಧಾರ್ ಸಂಖ್ಯೆ ಇಲ್ಲ ಅಥವಾ ಇದ್ದ ಆಧಾರ್ ಸಂಖ್ಯೆಯನ್ನು ಪಡಿತರ ಚೀಟಿಯೊಂದಿಗೆ ಜೋಡಣೆ ಮಾಡಿಲ್ಲ ಎಂಬ ಕಾರಣಕ್ಕಾಗಿ ಯಾರಿಗೂ ಪಡಿತರ ಸೌಲಭ್ಯವನ್ನು ನಿರಾಕರಿಸುವಂತಿಲ್ಲ ಎಂದು ಕೇಂದ್ರ ಆಹಾರ ಸಚಿವಾಲಯ ಎಲ್ಲ ರಾಜ್ಯಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.
ಆಧಾರ್ ಕಾಡರ್್ ಇಲ್ಲ ಎಂಬ ಕಾರಣಕ್ಕೆ ಪಡಿತರ ವ್ಯವಸ್ಥೆಯ ಅರ್ಹ ಫಲಾನುಭವಿಗಳ ಪಟ್ಟಿಯಿಂದ ಕುಟುಂಬಗಳ ಹೆಸರುಗಳನ್ನು ತೆಗೆದು ಹಾಕದಂತೆಯೂ ಸಚಿವಾಲಯ ನಿದರ್ೇಶಿಸಿದೆ.
ಆಧಾರ್ ಸಂಖ್ಯೆಯನ್ನು ಜೋಡಿಸಿಲ್ಲ ಎಂಬ ಕಾರಣ ನೀಡಿ ಪಡಿತರ ಚೀಟಿ ರದ್ದುಗೊಳಿಸಿದ್ದರಿಂದ ಪಡಿತರ ಆಹಾರ ಸಿಗದೇ ಜಾರ್ಖಂಡ್ನಲ್ಲಿ 11 ವರ್ಷದ ಬಾಲಕಿ ಹಸಿವಿನಿಂದ ಮೃತಪಟ್ಟಿದ್ದಾಳೆ ಎಂದು ಹೇಳಲಾದ ಪ್ರಕರಣ ವರದಿಯಾದ ನಂತರ ಸಚಿವಾಲಯ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸೂಚನೆ ನೀಡಿದೆ.
`ಪಡಿತರ ಚೀಟಿಯನ್ನು ರದ್ದುಪಡಿಸುವ ಮೊದಲು ಪರಿಶೀಲನೆ ನಡೆಸಬೇಕು. ಪಡಿತರ ಚೀಟಿ ಹೊಂದಿರುವ ವ್ಯಕ್ತಿ ಅಥವಾ ಕುಟುಂಬ ನೈಜ ಫಲಾನುಭವಿ ಅಲ್ಲ ಎಂಬುದು ದೃಢಪಟ್ಟ ನಂತರವೇ ಪಡಿತರ ವ್ಯವಸ್ಥೆಯಲ್ಲಿ ದಾಖಲಾಗಿರುವ ಆ ವ್ಯಕ್ತಿ ಅಥವಾ ಕುಟುಂಬದ ವಿವರಗಳನ್ನು ಅಳಿಸಿಹಾಕಬೇಕು' ಎಂದು ಹೊಸ ಸೂಚನೆಯಲ್ಲಿ ಹೇಳಲಾಗಿದೆ.
`ಆಧಾರ್ ಇಲ್ಲ ಅಥವಾ ಅದನ್ನು ಜೋಡಣೆ ಮಾಡಿಲ್ಲ ಅಥವಾ ಬಯೊಮೆಟ್ರಿಕ್ ಆಗಿ ದೃಢೀಕರಿಸಲು ತಾಂತ್ರಿಕ ದೋಷ ಇದೆ ಎಂಬ ಕಾರಣಕ್ಕೆ ಯಾರೊಬ್ಬರಿಗೂ ಪಡಿತರ ಆಹಾರ ಸಿಗದಂತೆ ಆಗಬಾರದು ಎಂಬುದು ನಮ್ಮ ಉದ್ದೇಶ. ನೈಜ ಮತ್ತು ಅರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಿಗಲೇಬೇಕು' ಎಂದು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಸಿಇಒ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.
ವ್ಯವಸ್ಥೆ ಮಾಡಿ: ಆಧಾರ್ ಸಂಖ್ಯೆ ಹೊಂದಿಲ್ಲದವರಿಗೆ ಅದನ್ನು ಪಡೆಯಲು ಮತ್ತು ಪಡಿತರ ಚೀಟಿಗೆ ಜೋಡಣೆ ಮಾಡಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಚಿವಾಲಯ ಕಟ್ಟು ನಿಟ್ಟಾಗಿ ಸೂಚಿಸಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಕಾರ, ಪಡಿತರ ಚೀಟಿಗೆ ಆಧಾರ್ ಜೋಡಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯಗಳಿಗೆ ಡಿಸೆಂಬರ್ 31ರ ಗಡುವು ವಿಧಿಸಲಾಗಿದೆ.
ಆದರೆ, ಈ ಗಡುವನ್ನು 2018ರ ಮಾಚರ್್ 31ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಸಕರ್ಾರ ಬುಧವಾರ ಸುಪ್ರೀಂ ಕೋಟರ್್ಗೆ ತಿಳಿಸಿದೆ. ದೇಶದಾದ್ಯಂತ ಇದುವರೆಗೆ ಶೇ 82ರಷ್ಟು ಪಡಿತರ ಚೀಟಿಗಳನ್ನು ಆಧಾರ್ನೊಂದಿಗೆ ಜೋಡಿಸಲಾಗಿದೆ.
ಮೊಬೈಲ್ಗೆ ಆಧಾರ್ ಜೋಡಣೆ: ತುತರ್ು ವಿಚಾರಣೆಗೆ ನಿರಾಕರಣೆ
ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಿಸುವುದನ್ನು ಕಡ್ಡಾಯಗೊಳಿಸಿ ದೂರಸಂಪರ್ಕ ಸಚಿವಾಲಯ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅಜರ್ಿಯನ್ನು ತುತರ್ಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋಟರ್್ ನಿರಾಕರಿಸಿದೆ.
ಈ ಅಜರ್ಿಯನ್ನು ಶುಕ್ರವಾರ ವಿಚಾರಣೆ ನಡೆಸಲು ನಿರಾಕರಿಸಿದ ನ್ಯಾಯಮೂತರ್ಿಗಳಾದ ಜೆ. ಚಲಮೇಶ್ವರ್ ಮತ್ತು ಎಸ್. ಅಬ್ದುಲ್ ನಜೀರ್ ಅವರಿದ್ದ ನ್ಯಾಯಪೀಠ, ಮುಖ್ಯನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಕೂಡ ಇಂತಹದೇ ವಿಷಯಗಳ ಬಗ್ಗೆ ವಿಚಾರಣೆ ನಡೆಸುತ್ತಿದೆ ಎಂದು ಹೇಳಿದೆ.
ಆಧಾರ್ಗೆ ಸಂಬಂಧಿಸಿದ ಇತರ ಅಜರ್ಿಗಳನ್ನು ಮುಖ್ಯ ನ್ಯಾಯಮೂತರ್ಿ ನೇತೃತ್ವದ ಪೀಠ ಅಕ್ಟೋಬರ್ 30ರಂದು ಕೈಗೆತ್ತಿಕೊಳ್ಳಲಿದ್ದು, ಅಂದೇ ಈ ವಿಚಾರವನ್ನು ಪ್ರಸ್ತಾಪಿಸುವಂತೆ ಅಜರ್ಿದಾರರ ಪರ ವಕೀಲರಿಗೆ ನ್ಯಾಯಪೀಠ ತಿಳಿಸಿದೆ.




