ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 21, 2017
ಪೊಲೀಸ್ ಮಹಾನಿದರ್ೇಶಕರಿಗೆ ಗೃಹಸಚಿವ ರಾಮಲಿಂಗಾ ರೆಡ್ಡಿ ಪತ್ರ
ದೀಪಿಕಾ ಪಡುಕೋಣೆ ಕುಟುಂಬದವರಿಗೆ ಭದ್ರತೆ ಒದಗಿಸಲು ರಾಜ್ಯ ಸಕರ್ಾರ ಆದೇಶ
ಬೆಂಗಳೂರು: ಸಂಜಯ್ ಲೀಲಾ ಬನ್ಸಾಲಿ ನಿದರ್ೇಶನದ `ಪದ್ಮಾವತಿ' ಚಲನಚಿತ್ರದಲ್ಲಿ ಪದ್ಮಾವತಿಯಾಗಿ ಕಾಣಿಸಿಕೊಂಡಿರುವ ನಟಿ ದೀಪಿಕಾ ಪಡುಕೋಣೆ ಅವರ ಹತ್ಯೆ ಮಾಡಿದವರಿಗೆ 10 ಕೋಟಿ ಆಮಿಷವೊಡ್ಡಿರುವ ಬಗ್ಗೆ ವರದಿಯಾಗಿರುವ ಹಿನ್ನೆಲೆಯಲ್ಲಿ ದೀಪಿಕಾ ಪಡುಕೋಣೆ ಹಾಗೂ ಅವರ ಕುಟುಂಬದವರಿಗೆ ರಾಜ್ಯದಲ್ಲಿ ಭದ್ರತೆ ಒದಗಿಸಲು ಸಕರ್ಾರ ಆದೇಶಿಸಿದೆ.
ಈ ಕುರಿತು ಗೃಹಹ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಜ್ಯ ಪೊಲೀಸ್ ಮಹಾ ನಿದರ್ೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರಿಗೆ ಪತ್ರ ಬರೆದಿದ್ದಾರೆ.
ದೀಪಿಕಾ ಅವರು ನಿದರ್ೇಶಕರ ನಿದರ್ೇಶನದಂತೆ ಚಿತ್ರದಲ್ಲಿ ನಟಿಸಿದ್ದಾರೆಯೇ ವಿನಾ ಚಿತ್ರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೂ ಅವರಿಗೂ ಯಾವುದೇ ಸಂಬಂಧ ಇರುವುದಿಲ್ಲ. ಒಂದು ವೇಳೆ ಚಲನಚಿತ್ರದಲ್ಲಿ ಇತಿಹಾಸವನ್ನು ತಿರುಚಿದ್ದರೆ ಅಥವಾ ರಜಪೂತ ಸಮುದಾಯದವರಿಗೆ ಅವಮಾನವಾಗುವಂಥ ಅಂಶಗಳಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳುವಂತೆ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ ಕೇಂದ್ರ ಸಕರ್ಾರ ನಿದರ್ೇಶನ ನೀಡಬಹುದಾಗಿದೆ. ಕಾನೂನನ್ನು ಕೈಗೆತ್ತಿಕೊಳ್ಳಲು ಕರೆ ನೀಡುವುದು ಸೃಜನಶೀಲ ಸ್ವಾತಂತ್ರ್ಯದ ಹಕ್ಕನ್ನು ಕಸಿದುಕೊಳ್ಳುವುದರ ಜತೆಗೆ ಅಪರಾಧ ಚಟುವಟಿಕೆಗೆ ಪ್ರಚೋದನೆ ನೀಡಿದಂತಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪದ್ಮಾವತಿ ರಾಣಿ ಪಾತ್ರದಲ್ಲಿ ನಟಿಸಿರುವ ದೀಪಿಕಾ ಪಡುಕೋಣೆ ಮತ್ತು ನಿದರ್ೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಶಿರಚ್ಛೇದ ಮಾಡಿದವರಿಗೆ ?10 ಕೋಟಿ ಬಹುಮಾನ ನೀಡುವುದಾಗಿ ಹರಿಯಾಣದ ಬಿಜೆಪಿ ಮುಖಂಡ, ಮುಖ್ಯ ಮಾಧ್ಯಮ ಸಂಚಾಲಕ ಸೂರಜ್ ಪಾಲ್ ಅಮು ಘೋಷಿಸಿದ್ದರು.


