HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಎಡೆ ಮಡೆಸ್ನಾನದಲ್ಲಿ 333 ಭಕ್ತರು ಮಂಗಳೂರು: ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿಯ ಸಂಭ್ರಮ ಮನೆ ಮಾಡಿದೆ. ಹದಿನಾರು ದಿನ ನಡೆಯಲಿರುವ ಈ ವಾಷರ್ಿಕ ಮಹೋತ್ಸವದಲ್ಲಿ ವಿವಿಧ ಧಾಮರ್ಿಕ ಕಾರ್ಯಕ್ರಮಗಳು ನಡೆಯಲಿವೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ವಿಶೇಷ ಸೇವೆಗಳಲ್ಲಿ ಎಡೆ ಮಡೆಸ್ನಾನವೂ ಒಂದಾಗಿದ್ದು, ಗುರುವಾರದಂದು (ಪಂಚಮಿ) ನಡೆದ ಈ ಸೇವೆಯಲ್ಲಿ 333 ಭಕ್ತರು ಪಾಲ್ಗೊಂಡಿದ್ದರು. ವಿವಾದದ ಕೇಂದ್ರಬಿಂದುವಾಗಿದ್ದ ಮಡೆ ಮಡೆ ಸ್ನಾನ ಕ್ಷೇತ್ರದಲ್ಲಿ ನಿಷೇಧಗೊಂಡ ಬಳಿಕ ಇದು ಮೂರನೇ ಬಾರಿಗೆ ಸುಬ್ರಹ್ಮಣ್ಯದಲ್ಲಿ ಎಡೆ ಮಡೆಸ್ನಾನವನ್ನು ನಡೆಸಲಾಯಿತು. ದೇವರ ನೈವೇದ್ಯವನ್ನು ದೇವಸ್ಥಾನದ ಪ್ರಾಂಗಣದಲ್ಲಿ ಬಡಿಸಿ, ಅದನ್ನು ಗೋವುಗಳಿಗೆ ನೀಡಲಾಗುತ್ತದೆ. ಆ ನಂತರ ಇದರ ಮೇಲೆ ಭಕ್ತಾಧಿಗಳು ಉರುಳುಸೇವೆ ಮಾಡುತ್ತಾರೆ. ಈ ಉರುಳು ಸೇವೆಯನ್ನು ಎಡೆ ಮಡೆಸ್ನಾನ ಎನ್ನುತ್ತಾರೆ. ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಬ್ರಾಹ್ಮಣರು ಊಟ ಮಾಡಿ ಬಿಟ್ಟ ಎಂಜಿಲ ಎಲೆಯ ಮೇಲೆ ಉರುಳು ಸೇವೆ ಮಾಡುವ ಮಡೆಮಡೆ ಸ್ನಾನವನ್ನು ನೆರವೇರಿಸಿಕೊಂಡು ಬರಲಾಗುತ್ತಿತ್ತು. ಅದು ನಿಷೇಧಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮೂರು ವರ್ಷಗಳಿಂದ ಇಲ್ಲಿ ಈಗ ಎಡೆ ಮಡೆಸ್ನಾನವನ್ನು ಆರಂಭಿಸಲಾಗಿದೆ. ಕುಕ್ಕೆ ಸುಬ್ರಮಣ್ಯ ಚಂಪಾ ಷಷ್ಠಿ ಬಹಿಷ್ಕರಿಸುವುದಾಗಿ ಮಲೆಕುಡಿಯರ ಬೆದರಿಕೆ ಕ್ಷೇತ್ರದಲ್ಲಿ ನಡೆಯುವ ಈ ವಿಶೇಷ ಸೇವೆಯಲ್ಲಿ ನೂರಾರು ಸಂಖ್ಯೆಯ ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ. ಈ ಸೇವೆಯನ್ನು ಮಾಡಿದಲ್ಲಿ ದೇಹಕ್ಕೆ ಅಂಟಿಕೊಂಡ ಚರ್ಮ ರೋಗಾದಿಗಳು ಸೇರಿದಂತೆ ಸಂಕಷ್ಟಗಳು ದೂರವಾಗುತ್ತವೆ ಎನ್ನುವ ನಂಬಿಕೆ ಇದೆ. ಶ್ರೀ ಕ್ಷೇತ್ರದಲ್ಲಿ ಗುರುವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಶುಕ್ರವಾರ ಬೆಳಗ್ಗೆ 8.30ರ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries