ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 21, 2017
48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ
ಪಣಜಿ: 48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(ಐಎಫ್ಎಫ್ಐ)ದ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಗಳು ಸೋಮವಾರ ಪ್ರಾರಂಭಗೊಂಡಿದ್ದು, ಬಾಲಿವುಡ್ ನಟ ಶಾರೂಕ್ ಖಾನ್ ಚಿತ್ರೋತ್ಸವಕ್ಕೆ ಚಾಲನೆ ನೀಡಿದರು.
ದೇಸೀ ಸಾಂಸ್ಕೃತಿ ಕಾರ್ಯಕ್ರಮಗಳ ಮೂಲಕ ಚಲನಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ನ.20 ರಿಂದ 28ರ ವರೆಗಿನ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಸಚಿವೆ ಸ್ಮೃತಿ ಇರಾನಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸೇರಿ ಹಲವು ರಾಜಕೀಯ ಮುಖಂಡರು ಹಾಗೂ ಸಿನಿಮಾ ರಂಗದ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.



