ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 25, 2017
83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ರಾಜ್ಯದಲ್ಲಿ ನಾಡಿಗೀತೆ ಇರುವಂತೆ ನಾಡಧ್ವಜವೂ ಇರಬೇಕು: ಸಿದ್ದರಾಮಯ್ಯ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ದೀಪ ಬೆಳಗಿಸುವ ಮೂಲಕ ಅಕ್ಷರ ಜಾತ್ರೆ ಉದ್ಘಾಟಿಸಿ ಮಾತನಾಡಿದ ಸಿಎಂ, ಕನರ್ಾಟಕದ ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ಧವಾಗಿರುವ ಮೈಸೂರಿನಲ್ಲಿ ಆಯೋಜಿಸಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದ್ದೇನೆ. ಇದು ನನ್ನ ಬದುಕಿನ ಸಾರ್ಥಕ ಕ್ಷಣಗಳಲ್ಲೊಂದು ಎಂದರು.
ರಾಜ್ಯದಲ್ಲಿ ನಾಡಿಗೀತೆ ಇರುವಂತೆ ನಾಡಧ್ವಜವೂ ಇರಬೇಕು ಎಂದು ಪ್ರತಿಪಾದಿಸಿದ ಸಿಎಂ, ತಮ್ಮ ಮಾತಿಗೆ ಪೂರಕವಾಗಿ ರಾಷ್ಟ್ರಕವಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ -ಗೀತೆಯನ್ನು ಬಳಸಿಕೊಂಡರು.
ನಾಡಗೀತೆ ಆಶಯಕ್ಕೆ, ಆದರ್ಶಕ್ಕೆ ನಾವು ಬದ್ಧರಾಗಿದ್ದೇವೆ. ಇದನ್ನು ವಿರೋಧಿಸುವುದು ನಾಡು ನುಡಿಗೆ ತೋರುವ ಅಗೌರವ. ಕನ್ನಡ ಎನ್ನುವುದು ನನಗೆ ರಾಜಕೀಯ ಅಲ್ಲ.ಅದು ನನ್ನ ಬದುಕು. ನಾನು ಹುಟ್ಟು ಕನ್ನಡಪ್ರೇಮಿ. ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ಸಾರ್ವತ್ರಿಕ ಜೀವನ ಪ್ರಾರಂಭಿಸಿದ್ದ ನಾನುಅಲ್ಲಿಂದ ಇಲ್ಲಿಯವರೆಗೆ ನೆಲ-ಜಲ-ನುಡಿಯ ಬಗ್ಗೆಎಂದೂ ರಾಜಿಮಾಡಿ ಕೊಂಡಿಲ್ಲ, ಎಂದೂ ರಾಜಕೀಯವನ್ನೂ ಮಾಡಿಲ್ಲ ಎಂದರು.
ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ! ಅದು ಕನ್ನಡದ ಜನ, ನೆಲ, ಜಲ, ಬದುಕು,ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡ ಕನರ್ಾಟಕ, ಅದುವೇ ಕನ್ನಡತನ. ಕನರ್ಾಟಕದ ನೆಲದಲ್ಲಿ ವಾಸಿಸುತ್ತಿರುವವರೆಲ್ಲರೂ ಕನ್ನಡಿಗರು ಎಂದು ನಾವು ತಿಳಿದು ಕೊಂಡಿದ್ದೇವೆ. ಎಂದು ಸಿಎಂ ಹೇಳಿದರು.
'ಅಭಿವ್ಯಕ್ತಿ ಸ್ವಾತಂತ್ರದಲ್ಲಿ ಬಲವಾದ ನಂಬಿಕೆ ನನ್ನದು. ಸಾಹಿತ್ಯ, ಚಿತ್ರಕಲೆ, ಸಂಗೀತ, ಮಾಧ್ಯಮ ಎಲ್ಲವೂ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಭಿನ್ನ ಮುಖಗಳು. ಇದನ್ನು ದೇಶಭಕ್ತಿ, ಧರ್ಮ, ರಾಷ್ಟ್ರೀಯತೆ ಹೆಸರಿನಲ್ಲಿ ದಮನ ಮಾಡುವುದು ಖಂಡನೀಯ' ಎಂದರು.
'ಅನ್ಯ ಭಾಷಿಕರು ಇಲ್ಲಿ ಬದುಕು ರೂಪಿಸಿಕೊಳ್ಳಲು ಅವರಿಗೆ ಸ್ವಾತಂತ್ರ್ಯವಿದೆಯಾದರೂ, ಇಲ್ಲಿನ ನೆಲದ ಭಾಷೆ ಕನ್ನಡವನ್ನು ಅವರು ಕಲಿಯಲೇಬೇಕು' ಎಂದು ಸಿದ್ದರಾಮಯ್ಯ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಐದನೇ ಬಾರಿಗೆ ನಡೆಯುತ್ತಿರುವ ಅಕ್ಷರ ಜಾತ್ರೆಗೆ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರು ಅಧ್ಯಕ್ಷತೆ ವಹಿಸಿದ್ದಾರೆ.


