ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 22, 2017
ಕಂಬಳ: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ
ಕಂಬಳಕ್ಕೆ ಅವಕಾಶ ನೀಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿದೆ. ಈ ಕುರಿತ ಕಾಯ್ದೆಗೆ ತಿದ್ದುಪಡಿ ತರಲು ಮತ್ತೆ ಮಸೂದೆ ಮಂಡಿಸಲಾಗಿದೆ ಎಂದು ರಾಜ್ಯ ಸಕರ್ಾರ ಸೋಮವಾರ ಸುಪ್ರೀಂ ಕೋಟರ್್ಗೆ ವಿವರಿಸಿತು.
ಕಂಬಳಕ್ಕೆ ಅವಕಾಶ ನೀಡುವ ಉದ್ದೇಶದಿಂದ ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತರಲು ಮಂಡಿಸಲಾದ ಮಸೂದೆಯನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕಳುಹಿಸಿದ್ದರು. ನಂತರ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದರು ಬದಲಾವಣೆಗಳೊಂದಿಗೆ ಮಸೂದೆ ಮಂಡಿಸಲಾಗಿದ್ದು, ಇದೇ 17ರಂದು ರಾಜ್ಯ ವಿಧಾನಸಭೆ ಅಂಗೀಕರಿಸಿದೆ. ವಿಧಾನ ಪರಿಷತ್ನ ಅಂಗೀಕಾರ ಬಾಕಿ ಇದೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ದೇವದತ್ತ ಕಾಮತ್ ಸಂಕ್ಷಿಪ್ತವಾಗಿ ವಿವರಿಸಿದರು.
ಪೆಟಾ ಇಂಡಿಯಾ ಸಂಸ್ಥೆಯು ಆತುರದಲ್ಲಿ, ಉದ್ದೇಶಪೂರ್ವಕವಾಗಿ ಅಜರ್ಿ ಸಲ್ಲಿಸಿದೆ ಎಂದು ಅವರು ಹೇಳಿದರು.
ಕಂಬಳಕ್ಕೆ ಅವಕಾಶ ನೀಡಿರುವುದನ್ನು ವಿರೋಧಿಸಿ ಪೆಟಾ ಇಂಡಿಯಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜರ್ಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಪೀಠವು, ಪ್ರಕರಣದ ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಿತು.


