ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 18, 2017
ಇಂದು (ನ.19)ಬಾಯಾರು ಪ್ರಶಾಂತಿಯಲ್ಲಿ ಉಚಿತ ವೈದ್ಯಕೀಯ ತಪಾಸಣೆ
ಉಪ್ಪಳ: ಶ್ರೀ ಸತ್ಯಸಾಯಿ ಸೇವಾ ಸಮಿತಿ ಬಾಯಾರು, ಪ್ರಶಾಂತಿ ಸೇವಾ ಟ್ರಸ್ಟ್ ಬಾಯಾರು ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವುಗಳ ಸಂಯುಕ್ತ ಅಶ್ರಯದಲ್ಲಿ ನ.19ರಂದು ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರ ಪರಿಸರದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ನೇತ್ರ ಪರೀಕ್ಷಾ ಶಿಬಿರ ನಡೆಯಲಿದೆ. ಬೆಳಗ್ಗೆ 9ರಿಂದ ರಿಂದ 12.30ರವರೆಗೆ ನಡೆಯಲಿರುವ ಶಿಬಿರದಲ್ಲಿ ಹೃದಯ ರೋಗ, ಸಾಮಾನ್ಯ ರೋಗ, ಮಕ್ಕಳ ಖಾಯಿಲೆ, ಕಿವಿ, ಮೂಗು, ಗಂಟಲು, ಎಲುಬು, ಗಂಟು, ಸ್ತ್ರೀ ರೋಗ, ಚರ್ಮರೋಗ ಹಾಗೂ ನೇತ್ರ ಚಿಕಿತ್ಸಾ ತಜ್ಞರು ಭಾಗವಹಿಸಿ ಸೂಕ್ತ ತಪಾಸಣೆ ನಡೆಸಿ ಸಲಹೆ, ಔಷಧಿಗಳನ್ನು ಉಚಿತವಾಗಿ ನೀಡಲಿರುವರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.

