ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 13, 2017
ಜಮ್ಮು ಮತ್ತು ಕಾಶ್ಮೀರ: ಉಗ್ರರಿಬ್ಬರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಶ್ರೀನಗರ: ಭಾರತೀಯ ಸೇನೆ ಯೋಧರು ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದವಾರದಲ್ಲಿ ಭದ್ರತಾ ಪಡೆ ಯೋಧರು ನಡೆಸಿದ ಕಾಯರ್ಾಚರಣೆ ವೇಳೆ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು ಅವರ ಗುರುತು ಪತ್ತೆಯಾಗಿಲ್ಲ.
ಹಂದವಾರದ ಸುಲ್ತಾನ್ ಪುರದ ಪೊಲೀಸ್ ಚೆಕ್ ಪೋಸ್ಟ್ ಬಳಿ ಉಗ್ರರಿಬ್ಬರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಭದ್ರತಾ ಪಡೆ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

