ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 26, 2017
ಬೃಹತ್ ಶೋಭಾಯಾತ್ರೆ; ಹಿಂದೂ ಸಮಾಜೋತ್ಸವಕ್ಕೆ ಯೋಗಿ, ಉಮಾಭಾರತಿ ಗೈರು
ಉಡುಪಿ:ಇಲ್ಲಿನ ಕಲ್ಸಂಕದ ರೋಯಲ್ ಗಾರ್ಡನ್ ಆವರಣದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಧರ್ಮ ಸಂಸದ್ ಗೆ ಭಾನುವಾರ ವಿಧ್ಯುಕ್ತವಾಗಿ ತೆರೆ ಬಿದ್ದಿದ್ದು, ಮಧ್ಯಾಹ್ನ ಜೋಡುಕಟ್ಟೆಯಿಂದ ಎಂಜಿಎಂ ಮೈದಾನದವರೆಗೆ ವಿರಾಟ್ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ನಡೆದ ಆಕರ್ಷಕ ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು.
ಜೋಡುಕಟ್ಟೆಯಿಂದ ಕಾಲ್ನಡಿಗೆಯಲ್ಲಿ ಸಾಗಿದ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಆಕರ್ಷಕ ಟ್ಯಾಬ್ಲೋಗಳು ಎಲ್ಲರ ಗಮನ ಸೆಳೆಯಿತು.
ವಿರಾಟ್ ಹಿಂದೂ ಸಮಾಜೋತ್ಸವಕ್ಕೆ ಯೋಗಿ, ಉಮಾಭಾರತಿ ಗೈರು:
ಸಂಜೆ ಎಂಜಿಎಂ ಮೈದಾನದಲ್ಲಿ ನಡೆಯಲಿರುವ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಉಮಾಭಾರತಿ, ಯೋಗ ಪಟು ಬಾಬಾ ರಾಮ್ ದೇವ್, ಶ್ರೀಶ್ರೀ ರವಿಶಂಕರ್ ಗುರೂಜಿ ಪಾಲ್ಗೊಂಡಿರಲಿಲ್ಲ. ಗುಜರಾತ್ ಹಾಗೂ ಉತ್ತರಪ್ರದೇಶ ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಅವರು ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿ ಹೇಳಿದೆ.


