ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 23, 2017
ಗಡಿನಾಡಿನ ಸಾಹಿತ್ಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ ಕಟಿಬದ್ಧ : ಡಾ.ವಸುಂಧರಾ ಭೂಪತಿ
ಕಾಸರಗೋಡು: ಗಡಿನಾಡು ಕಾಸರಗೋಡಿನ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ಹೆಚ್ಚಿನ ಮಹತ್ವವನ್ನು ನೀಡಲು ಸಿದ್ಧವಾಗಿದೆ. ಅಮೂಲ್ಯ ಕೃತಿಗಳನ್ನು ಪ್ರಕಟಿಸುವ ಹಾಗೂ ಪ್ರಕಾಶನ ಸಂಸ್ಥೆಗಳಿಗೆ ಬೆಂಬಲ ನೀಡುವ ಯೋಜನೆಗಳಲ್ಲಿ ಕಾಸರಗೋಡಿನ ಕನ್ನಡಿಗರಿಗೆ ಮಹತ್ವ ನೀಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಅವರು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ನಡೆದ ವಿದ್ಯಾಥರ್ಿಗಳೊಂದಿಗಿನ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉದಯೋನ್ಮುಖ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸುವ ಯೋಜನೆಯಲ್ಲಿ ಇದುವರೆಗೆ ಮೂವತ್ತು ಮಂದಿಯನ್ನು ಮಾತ್ರ ಆಯ್ಕೆ ಮಾಡಲಾಗುತ್ತಿತ್ತು. ಅದನ್ನು ಈಗ ನಲ್ವತ್ತಕ್ಕೆ ಏರಿಸಲಾಗಿದೆ ಎಂದ ಅವರು ಗಡಿನಾಡಿನ ಸಾಹಿತ್ಯ ಚಟುವಟಿಕೆಗಳು ಹೆಚ್ಚು ಸಂತೋಷ ನೀಡುತ್ತಿವೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತಾ ಎಸ್. ಸ್ವಾಗತಿಸಿ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎ.ಶ್ರೀನಾಥ್ ಕಾಸರಗೋಡು ಮಾತನಾಡಿದರು. ಅಬ್ದುಲ್ ರಹಮಾನ್ ಸುಬ್ಬಯ್ಯಕಟ್ಟೆ, ಸುನೀತ್ ಕುಮಾರ್ ಉಪಸ್ಥಿತರಿದ್ದರು. ಡಾ.ರತ್ನಾಕರ ಮಲ್ಲಮೂಲೆ ಕಾರ್ಯಕ್ರಮ ನಿರೂಪಿಸಿದರು. ಮಹಮ್ಮದಾಲಿ ವಂದಿಸಿದರು. ಸ್ನೇಹರಂಗದ ಉಪಾಧ್ಯಕ್ಷೆ ಅನುರಾಧಾ ಕೆ, ರಾಜಾರಾಮ ಪಿ, ಗಿರೀಶ್ ಕುಮಾರ್, ದಿತಿ ಜಿ.ಬಿ, ಸಂಶೋಧನಾ ವಿದ್ಯಾಥರ್ಿ ರವಿಶಂಕರ ಜಿ.ಕೆ. ಮುಂತಾದವರು ಮಾತನಾಡಿದರು.


