ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 10, 2017
ಕೋಲ್ಕತಾ-ಖುಲ್ನಾ ಬಂಧನ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ, ಬಾಂಗ್ಲಾ ಪ್ರಧಾನಿ ಶೇಖ್ ಹಸಿನಾ ಚಾಲನೆ
ಕೋಲ್ಕತಾ: ಕೋಲ್ಕಾತದಿಂದ ಬಾಂಗ್ಲಾದೇಶದ ನೈಋತ್ಯ ಭಾಗದ ಕೈಗಾರಿಕಾ ನಗರಿ ಖುಲ್ನಾಗೆ ಸಂಪರ್ಕ ಕಲ್ಪಿಸುವ ಹೊಸ ಪ್ರಯಾಣಿಕ ರೈಲು 'ಬಂಧನ್ ಎಕ್ಸ್ ಪ್ರೆಸ್'ಗೆ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ ಅವರು ಗುರುವಾರ ಚಾಲನೆ ನೀಡಿದರು.
ಈ ಮೂವರು ನಾಯಕರು ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಬಂಧನ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ಸಂಪೂರ್ಣ ಹವಾ ನಿಯಂತ್ರಿತವಾಗಿರುವ ಈ ರೈಲು ವಾರಕ್ಕೆ ಒಂದು ದಿನ, ಪ್ರತಿ ಗುರುವಾರ ಕೋಲ್ಕತಾದಿಂದ ಖುಲ್ನಾಗೆ ಸಂಚರಿಸಲಿದೆ.
ರೈಲಿಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಬಂಧನ್ ಎಕ್ಸ್ ಪ್ರೆಸ್ ನಿಂದಾಗಿ ಭಾರತ-ಬಾಂಗ್ಲಾದೇಶ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದಿದ್ದಾರೆ.


