ಯಾವುದೇ ಶೀರ್ಷಿಕೆಯಿಲ್ಲ
0
ನವೆಂಬರ್ 25, 2017
ಡಿ.15 ರಿಂದ ಜ.5 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ನವದೆಹಲಿ: ಡಿಸೆಂಬರೇ 5 ರಿಂದ ಜನವರಿ 5 ರ ವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಘೋಷಿಸಿದೆ.
14 ದಿನಗಳ ಕಾಲ ಸಂಸತ್ ಅಧಿವೇಶನ ನಡೆಯಲಿದ್ದು, ಡಿ.25 ಹಾಗೂ ಡಿ.26 ಕ್ರಿಸ್ ಮಸ್ ರಜೆ ಇರಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮರ್ ಹೇಳಿದ್ದಾರೆ. ಸಂಸತ್ ಚಳಿಗಾಲದ ಅಧಿವೇಶನವನ್ನು ಉದ್ದೇಶಪೂರ್ವಕವಾಗಿ ಎನ್ ಡಿಎ ಸಕರ್ಾರ ಮುಂದೂಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷಗಳ ಪ್ರಶ್ನೆಗಳನ್ನು ಎದುರಿಸಲು ಸಾಧ್ಯವಾಗದೇ ಸಕರ್ಾರ ಅಧಿವೇಶನದ ದಿನಾಂಕವನ್ನು ಮುಂದೂಡುತ್ತಿದೆ ಎಂದು ಗುಲಾಂ ನಬಿ ಆಜಾದ್ ಆರೋಪಿಸಿದ್ದರು. ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕುವುದಕ್ಕಾಗಿ ಕೇಂದ್ರ ಸಕರ್ಾರ ಅಧಿವೇಶನದ ದಿನಾಂಕವನ್ನು ಮುಂದೂಡುತ್ತಿದೆ ಎಂದು ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದವು.

