ಯಾವುದೇ ಶೀರ್ಷಿಕೆಯಿಲ್ಲ
0
ಡಿಸೆಂಬರ್ 07, 2017
ಕೊಹ್ಲಿ ನಾಯಕತ್ವದಲ್ಲಿ ಇನ್ನೊಂದು ವಿಶ್ವದಾಖಲೆ: ಸತತ 9 ಸರಣಿ ಗೆದ್ದ ಭಾರತ
ನವದೆಹಲಿ: ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಮತ್ತೊಂದು ವಿಶ್ವದಾಖಲೆಯನ್ನು ಮಾಡಿದೆ.
ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಸತತ 9 ಸರಣಿ ಗೆದ್ದ ದಾಖಲೆಯನ್ನು ಮಾಡಿದ್ದು ಆ ಮೂಲಕ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ದಾಖಲೆಯನ್ನು ಸರಿಗಟ್ಟಿದೆ.
2005ರಿಂದ 2008ರವರೆಗೆ ಸತತ 9 ಸರಣಿ ಗೆಲುವು ಕಂಡಿದ್ದ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿರುವ ದಾಖಲೆಯನ್ನು ಟೀಂ ಇಂಡಿಯಾ ಸರಿಗಟ್ಟಿದೆ. ಇನ್ನು ಜನವರಿಯಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧದ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಗೆದ್ದರೆ ಸತತ 10ನೇ ಸರಣಿ ಗೆಲುವು ದಾಖಲಿಸುವ ಮೂಲಕ ಹೊಸ ವಿಶ್ವದಾಖಲೆ ಬರೆಯಬಹುದು.
ಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿತ್ತು. ಆ ನಂತರ ಕೊಲ್ಕತ್ತಾ ಹಾಗೂ ನವದೆಹಲಿಯಲ್ಲಿ ನಡೆದಿದ್ದ ಎರಡು ಟೆಸ್ಟ್ ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿದ್ದವು.


