ಮಂಜೇಶ್ವರ: ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರ ಸಮೀಪವಿರುವ ಕಟ್ಟೆಗೆ ಸಾಮರಸ್ಯ ಕೆಡಿಸುವ ದುರುದ್ದೇಶದಿಂದ ಕಿಡಿಗೇಡಿಗಳು ಹಸಿರು ಬಣ್ಣ ಬಳಿದು ಟಿಪ್ಪು ಕಟ್ಟೆ ಎಂದು ಬರೆದಿರುವುದು ಖಂಡನೀಯ ಎಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ತಿಳಿಸಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಿತಿಯು ಆಗ್ರಹಿಸಿದೆ.