ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಕೆ ವಿವಾದ: ದೇಗುಲಕ್ಕೆ ಪೊಲೀಸ್ ಭದ್ರತೆ
ಮಂಗಳೂರು: ಇಲ್ಲಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಕೆ ವಿವಾದ ಸಂಬಂಧ ದೇವಸ್ಥಾನಕ್ಕೆ ಶನಿವಾರ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಸುವುದರಿಂದ ಸುತ್ತಮುತ್ತಲಿನ ಮನೆಗಳಲ್ಲಿ ಇರುವವರಿಗೆ ತೊಂದರೆ ಆಗುತ್ತಿದೆ ಎಂದು ಹೇಳಿ ಬ್ಲೇನಿ ಡಿಸೋಜ ಎಂಬವರು ಮೇಯರ್ಗೆ ಪತ್ರ ಬರೆದಿದ್ದರು.
ಇದರ ವಿರುದ್ಧ ವಿಶ್ವ ಹಿಂದೂ ಪರಿಷತ್ ಇಂದು ಪ್ರತಿಭಟನೆಗೆ ಮುಂದಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಸುವ ಸೂಚನೆ ಲಭಿಸಿದ್ದರಿಂದ ದೇವಸ್ಥಾನಕ್ಕೆ ಭದ್ರತೆ ಒದಗಿಸಲಾಗಿದೆ.
ಹೀಗಿದ್ದರೂ ಭಕ್ತರು ಎಂದಿನಂತೆ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದಾರೆ.